ಕರ್ನಾಟಕ

karnataka

ETV Bharat / state

ಭಾರಿ ಮಳೆ:  ಪಿಲಿಕುಳ ಜೈವಿಕ ಉದ್ಯಾನಕ್ಕೆ ನುಗ್ಗಿದ ನೀರು - rain water rushed into pilkula zoo in manglore

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಇಲ್ಲಿನ ಪ್ರವಾಸಿ ತಾಣ ಪಿಲಿಕುಳ ನಿಸರ್ಗಧಾಮಕ್ಕೆ ನೀರು ನುಗ್ಗಿದೆ. ಇದರಿಂದಾಗಿ ಇಲ್ಲಿನ ಪ್ರಾಣಿಗಳಿಗೆ ಸಂಕಷ್ಟ ಎದುರಾಗಿದೆ. ಸದ್ಯ ಮೃಗಾಲಯ ವೀಕ್ಷಣೆಯನ್ನು ನಿರ್ಬಂಧಿಸಲಾಗಿದೆ.

heavy-rain-manglore-rainwater-rushed-into-pilikula-zoo
ಭಾರಿ ಮಳೆ :  ಪಿಲಿಕುಳ ಜೈವಿಕ ಉದ್ಯಾನವನಕ್ಕೆ ನುಗ್ಗಿದ ನೀರು

By

Published : Jul 9, 2022, 7:30 PM IST

ಮಂಗಳೂರು: ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಇಲ್ಲಿನ ಪ್ರವಾಸಿ ತಾಣವಾದ ಪಿಲಿಕುಳ ಮೃಗಾಲಯಕ್ಕೆ ಭಾರಿ ಪ್ರಮಾಣದ ನೀರು ನುಗ್ಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಆರು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಕಳೆದ ಕೆಲವು ದಿನಗಳಿಂದ ರೆಡ್ ಅಲರ್ಟ್ ಘೋಷಿಸಲಾಗಿದೆ.

ಭಾರಿ ಮಳೆ : ಪಿಲಿಕುಳ ಜೈವಿಕ ಉದ್ಯಾನವನಕ್ಕೆ ನುಗ್ಗಿದ ನೀರು

ಪಿಲಿಕುಳ ಜೈವಿಕ ಉದ್ಯಾನಕ್ಕೆ ನೀರು ನುಗ್ಗಿದ್ದು, ಇಲ್ಲಿಗೆ ತೆರಳುವ ರಸ್ತೆಯೂ ಜಲಾವೃತವಾಗಿದೆ. ಮತ್ತೊಂದೆಡೆ ಉದ್ಯಾನದ ಒಳಭಾಗದಲ್ಲೂ ನೀರು ನುಗ್ಗಿ ಸಂಕಷ್ಟ ಎದುರಾಗಿದೆ. ಕಡವೆಗಳು ಇರುವ ಪ್ರದೇಶದಲ್ಲಿ ಭಾರಿ ಪ್ರಮಾಣದಲ್ಲಿ ನೀರು ಹರಿಯುತ್ತಿದ್ದು, ಉದ್ಯಾನದ ಅಲ್ಲಲ್ಲಿ ನೀರು ನುಗ್ಗಿ ಪ್ರಾಣಿಗಳ ವಾಸ್ತವ್ಯಕ್ಕೂ ಕಷ್ಟವಾಗಿದೆ.

ಮಳೆಗಾಲದಲ್ಲಿ ಸಾಧಾರಣವಾಗಿ ನೀರು ಬರುತ್ತದೆಯಾದರೂ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಇದೇ ಮೊದಲ ಬಾರಿಗೆ ನೀರು ಒಳನುಗ್ಗಿದೆ. ಸದ್ಯ ಪ್ರವಾಸಿಗರಿಗೆ ಪಿಲಿಕುಳ ಮೃಗಾಲಯಕ್ಕೆ ವೀಕ್ಷಣೆಯನ್ನು ನಿರ್ಬಂಧಿಸಲಾಗಿದೆ.

ಓದಿ :ಅಮರನಾಥ ಯಾತ್ರೆ: ಬಂಟ್ವಾಳದ 30 ಜನರ ತಂಡ ಸುರಕ್ಷಿತ

ABOUT THE AUTHOR

...view details