ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆ ಗುರುವಾರ (ಜುಲೈ 7) ರಂದು ಶಾಲಾ ಕಾಲೇಜುಗಳಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದು, ನಾಳೆ ಕೂಡ ರಜೆ ಘೋಷಿಸಲಾಗಿದೆ. ಅಂಗನವಾಡಿ, ಶಾಲೆ, ಪಿಯು, ಪದವಿ ಕಾಲೇಜು, ಸ್ನಾತಕೋತ್ತರ, ಡಿಪ್ಲೋಮ, ಇಂಜಿನಿಯರಿಂಗ್, ಐಟಿಐಗಳಿಗೆ ರಜೆ ಘೋಷಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ: ನಾಳೆ ಶಾಲಾ - ಕಾಲೇಜುಗಳಿಗೆ ರಜೆ - karnataka rrain news
ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಗುರುವಾರವೂ ಸಹ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ರೆಡ್ ಅಲರ್ಟ್ ಘೋಷಣೆ ಮಾಡಲಾಗಿತ್ತು. ನಾಳೆ ಆರೆಂಜ್ ಅಲರ್ಟ್ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಇನ್ನೂ ಮಕ್ಕಳು ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ, ಸಮುದ್ರ ತೀರಕ್ಕೆ ಹೋಗದಂತೆ ಜಾಗ್ರತೆ ವಹಿಸಬೇಕು, ಮೀನುಗಾರರು ಸಮುದ್ರಕ್ಕೆ ಇಳಿಯಬಾರದು, ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿರಬೇಕು, ವಿಪತ್ತು ನಿರ್ವಹಣೆಯನ್ನು ಚಾಚು ತಪ್ಪದೇ ಕಡ್ಡಾಯವಾಗಿ ನಿರ್ವಹಿಸಬೇಕು ಎಂದು ಆದೇಶಿಸಲಾಗಿದೆ.
ಇದನ್ನೂ ಓದಿ:ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗಲು ಮಂಗಳೂರಿಗೆ ಬಂದಿಳಿದ ಸೋನು ಸೂದ್