ಬೆಳ್ತಂಗಡಿ: ಕಳೆದ ಕೆಲ ದಿನಗಳಿಂದ ಭಾರಿ ಮಳೆ ಸುರಿಯುತ್ತಿದ್ದು ನೇತ್ರಾವತಿ ನದಿ ನೀರಿನ ಮಟ್ಟ ಹೆಚ್ಚಾಗಿದೆ.
ನೇತ್ರಾವತಿ ನದಿ ನೀರಿನ ಮಟ್ಟದಲ್ಲಿ ಏರಿಕೆ: ಧರ್ಮಸ್ಥಳ ಸ್ನಾನಘಟ್ಟದ ಕಿಂಡಿ ಅಣೆಕಟ್ಟು ಮುಳುಗಡೆ
ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದು, ಅಪಾಯದ ಮಟ್ಟ ತಲುಪಿದೆ.
ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದು, ಅಪಾಯದ ಮಟ್ಟಕ್ಕೆ ಬಂದಿದೆ. ಸ್ನಾನ ಘಟ್ಟ ಸಮೀಪದ ಕಿಂಡಿ ಅಣೆಕಟ್ಟು ಸಂಪೂರ್ಣ ಮುಳುಗಡೆಯಾಗಿದೆ. ತಾಲೂಕಿನ ಹಲವೆಡೆ ಭಾರಿ ಮಳೆಯಾಗುತ್ತಿದ್ದು, ಗಾಳಿ ಮಳೆಗೆ ಮನೆಗಳ ಮೇಲೆ ಮರಗಳು ಬಿದ್ದು ಹಾನಿಯಾಗಿದೆ. ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಮರ ಹಾಗೂ ದೊಡ್ಡ ಕಲ್ಲುಗಳು ರಸ್ತೆಗೆ ಉರುಳಿ ಬಿದ್ದುದರಿಂದ ರಸ್ತೆ ಸಂಚಾರಕ್ಕೆ ತೊಂದರೆಯಾಗಿದೆ.
ಇನ್ನು ತಾಲೂಕಿನ ಬಹುತೇಕ ಕಡೆಗಳಲ್ಲಿ ವಿದ್ಯುತ್ ಕಂಬಗಳು ಉರುಳಿ ಬಿದ್ದಿದ್ದು ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಮೆಸ್ಕಾಂ ಸಿಬ್ಬಂದಿಗೆ ಇವುಗಳನ್ನು ದುರಸ್ತಿ ಮಾಡಲು ಮಳೆ ಹಾಗೂ ಗಾಳಿ ಅಡಚಣೆಯಾಗಿದೆ.