ಕರ್ನಾಟಕ

karnataka

ETV Bharat / state

ಹರೇಕಳ ಗ್ರಾಮದ ಗ್ರಾಮಪಂಚಾಯಿತಿ ಕಟ್ಟಡದಲ್ಲಿ ಹಾಜಬ್ಬರ ಚಿತ್ರ: ಅಕ್ಷರ ಸಂತನಿಗೆ ವಿಶೇಷ ಗೌರವ

ಹರೇಕಳ ಗ್ರಾಮದ ಬಾವಲಿಗುರಿ ಪ್ರದೇಶದಲ್ಲಿ ನೂತನ ಗ್ರಾಮಪಂಚಾಯಿತಿ ಕಟ್ಟಡ ನಿರ್ಮಿಸಲಾಗುತ್ತಿದೆ. ಈ ಕಟ್ಟಡದ ಗೋಡೆಗೆ ಹರೇಕಳ ಹಾಜಬ್ಬರ ಚಿತ್ರವನ್ನು ಬಿಡಿಸಲಾಗಿದೆ. ಈ ಮೂಲಕ ಅವರಿಗೆ ವಿಶೇಷ ಗೌರವ ನೀಡಲಾಗಿದೆ.

By

Published : Nov 16, 2022, 12:22 PM IST

Heralakatte Hajjabba Picture
ಗ್ರಾಮಪಂಚಾಯಿತಿ ಕಟ್ಟಡದಲ್ಲಿ ಹಾಜಬ್ಬರ ಚಿತ್ರ

ಉಳ್ಳಾಲ:ಹರೇಕಳ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ನೂತನ ಪಂಚಾಯಿತಿ ಕಟ್ಟಡದ ಗೋಡೆ ತುಂಬಾ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರ ಚಿತ್ರವನ್ನು ರಚಿಸಲಾಗಿದೆ. ಈ ಮೂಲಕ ಗ್ರಾಮದ ಹೆಸರನ್ನು ಜಗತ್ತಿಗೆ ಪಸರಿಸಿದ ಅಕ್ಷರ ಸಂತನಿಗೆ ಗೌರವ ನೀಡಲಾಗಿದೆ.

ಶಾಸಕರ ವಿಶೇಷ ಹಾಗೂ ವಿವಿಧ ಅನುದಾನದಡಿ ಹರೇಕಳ ಗ್ರಾಮಕ್ಕೆ ಬಾವಲಿಗುರಿ ಪ್ರದೇಶದಲ್ಲಿ ನೂತನ ಕಟ್ಟಡ ನಿರ್ಮಾಣವಾಗುತ್ತಿದೆ. ಒಂದೂವರೆ ವರ್ಷದಿಂದ ನಡೆಯುತ್ತಿದ್ದ ಕಾಮಗಾರಿ ಇದೀಗ ಸಮಾರೋಪಾದಿಯಲ್ಲಿದ್ದು, ಶೀಘ್ರದಲ್ಲೇ ಉದ್ಘಾಟನೆ ಹಂತಕ್ಕೆ ತಲುಪಲಿದೆ. ಕಟ್ಟಡದ ಒಂದು ಅಂತಸ್ತಿನ ಗೋಡೆಯ ತುಂಬೆಲ್ಲ ಅಕ್ಷರ ಸಂತ ಹರೇಕಳ ಹಾಜಬ್ಬ ಅವರ ಚಿತ್ರವನ್ನು ರಚಿಸಲಾಗಿದೆ.

ಹರೇಕಳ ಗ್ರಾಮದ ಗ್ರಾಮಪಂಚಾಯಿತಿ ಕಟ್ಟಡದಲ್ಲಿ ಹಾಜಬ್ಬರ ಚಿತ್ರ

ಹರೇಕಳ ಹಾಜಬ್ಬ ಗ್ರಾಮದ ಹೆಸರನ್ನು ಇಡೀ ಜಗತ್ತಿಗೆ ಪಸರಿಸಿದ್ದಾರೆ. ಕಿತ್ತಳೆ ಹಣ್ಣು ಮಾರಿ ತಮ್ಮೂರಿನಲ್ಲಿ ಶಾಲೆ ಕಟ್ಟಿ ಮಕ್ಕಳಿಗೆ ವಿದ್ಯಾಭ್ಯಾಸ ನೀಡಿದ ಶ್ರೇಷ್ಟರಾಗಿದ್ದಾರೆ. ಗ್ರಾಮಕ್ಕೆ ವಿಶೇಷ ಗೌರವ ಅವರಿಂದಲೇ ಬಂದಿದೆ. ದೇಶದ ಅತ್ಯುನ್ನತ ಪದ್ಮಶ್ರೀ ಪುರಸ್ಕಾರಕ್ಕೆ ಇವರು ಭಾಜನರಾಗಿದ್ದಾರೆ. ಆದ್ದರಿಂದ ಗ್ರಾಮದ ಸರ್ವ ಸದಸ್ಯರ ನಿರ್ಣಯದಂತೆ ಕಟ್ಟಡದಲ್ಲಿ ಪದ್ಮಶ್ರೀ ಹರೇಕಳ ಹಾಜಬ್ಬ ಅವರ ಚಿತ್ರ ರಚಿಸಲಾಗಿದೆ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷ ಬದ್ರುದ್ದೀನ್ ಈಟಿವಿ ಭಾರತಕ್ಕೆ ತಿಳಿಸಿದ್ದಾರೆ.

ಇದನ್ನೂ ಓದಿ:ಪಿಯುಸಿ ಕಟ್ಟಡದ ಕನಸು ಹೊತ್ತ ಅಕ್ಷರ ಸಂತನಿಗೆ 5 ಲಕ್ಷದ ಚೆಕ್ ಹಸ್ತಾಂತರ

ABOUT THE AUTHOR

...view details