ಕರ್ನಾಟಕ

karnataka

ETV Bharat / state

ಬಂಟ್ವಾಳದ 81ರ ವೃದ್ಧನಿಗೀಗ ಅಂಗನವಾಡಿ ಸ್ವಚ್ಛತಾ ಶಿಕ್ಷೆ: ಜೈಲಿನ ಬದಲು ಅಂಗನವಾಡಿಗೆ ಕಳುಹಿಸಿದ ಹೈಕೋರ್ಟ್​ - high court orders to old man

ಬಂಟ್ವಾಳದ ಆರೋಪಿಯ ಸನ್ನಡತೆ, ಪ್ರಾಮಾಣಿಕತೆ ಪರಿಗಣಿಸಿ ಜೈಲು ಶಿಕ್ಷೆಯ ಬದಲು ಹೈಕೋರ್ಟ್​ ಅಂಗನವಾಡಿಯಲ್ಲಿ ವೇತನವಿಲ್ಲದೇ ಶುಚಿತ್ವದ ಕೆಲಸ ನಿರ್ವಹಿಸುವಂತೆ ಆದೇಶಿಸಿದೆ.

ಕರೋಪಾಡಿ ಗ್ರಾಮದ ನಿವಾಸಿ ಐತಪ್ಪ ನಾಯ್ಕ
ಕರೋಪಾಡಿ ಗ್ರಾಮದ ನಿವಾಸಿ ಐತಪ್ಪ ನಾಯ್ಕ

By

Published : Mar 6, 2023, 4:10 PM IST

ಕರೋಪಾಡಿ ಗ್ರಾಮದ ನಿವಾಸಿ ಐತಪ್ಪ ನಾಯ್ಕ ಅವರು ಮಾತನಾಡಿದರು

ಬಂಟ್ವಾಳ : ಅಪರಾಧ ಪ್ರಕರಣಗಳಲ್ಲಿ ತಪ್ಪೆಸಗಿದವರಿಗೆ ಗರಿಷ್ಠ ಶಿಕ್ಷೆ ಕೊಡಬೇಕು ಎಂದು ಕಾನೂನು ಹೇಳುತ್ತದೆ. ಆದರೆ ಜೈಲು ಕೈದಿಗಳ ಸನ್ನಡತೆ ಆಧರಿಸಿ ಮನೆಗೆ ಮರಳಿದ್ದುಂಟು. ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ ಈ 81 ವರ್ಷ ಪ್ರಾಯದ ವೃದ್ಧನ ಪಾಲಿಗೆ, ಹೈಕೋರ್ಟ್ ಔದಾರ್ಯ ತೋರಿದೆ. ಸನ್ನಡತೆ, ಪ್ರಾಮಾಣಿಕತೆ ಪರಿಗಣಿಸಿ ಜೈಲು ಶಿಕ್ಷೆಯ ಬದಲು ಅಂಗನವಾಡಿಯಲ್ಲಿ ಸೇವೆ ಮಾಡಲು ಹಚ್ಚಿದೆ. ಅದರಂತೆ, ವೃದ್ಧ ವ್ಯಕ್ತಿಯೀಗ ಕರೋಪಾಡಿಯ ಅಂಗನವಾಡಿಯಲ್ಲಿ ಶುಚಿತ್ವದ ಕೆಲಸದಲ್ಲಿ ತೊಡಗಿದ್ದಾರೆ.

ಇದನ್ನೂ ಓದಿ :ಬೆಂಗಳೂರು ನಗರ ಡಿಸಿ ಕಚೇರಿಯಲ್ಲಿದೆ ನೌಕರಿ: 105 ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

ಆರೋಪಿಗೆ ಶಿಕ್ಷೆ ಹೆಚ್ಚಿಸುವಂತೆ ದೂರುದಾರರಿಂದ ಮೇಲ್ಮನವಿ:ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ ನಿವಾಸಿ ಐತಪ್ಪ ನಾಯ್ಕ ಅವರದ್ದು ಬಡ ಕುಟುಂಬ. 2008ರಲ್ಲಿ ಜಾಗದ ವಿಚಾರದಲ್ಲಿ ನೆರೆಮನೆಯ ವ್ಯಕ್ತಿಯೊಬ್ಬರಿಗೆ ಐತಪ್ಪ ನಾಯ್ಕ ಹಲ್ಲೆ ಮಾಡಿದ್ದರು. ಪ್ರಕರಣದಲ್ಲಿ ಬಂಟ್ವಾಳದ ಕೋರ್ಟ್, ಆರೋಪಿ ಐತಪ್ಪ ನಾಯ್ಕರಿಗೆ ಮೂರು ದಿನಗಳ ಜೈಲು ಶಿಕ್ಷೆ ಮತ್ತು ಹತ್ತು ಸಾವಿರ ದಂಡ ವಿಧಿಸಿತ್ತು. ಆದರೆ, ದೂರುದಾರ ವ್ಯಕ್ತಿ ಆರೋಪಿಗೆ ಶಿಕ್ಷೆಯ ಪ್ರಮಾಣ ಹೆಚ್ಚಿಸಬೇಕೆಂದು ಮಂಗಳೂರಿನ ಕೋರ್ಟಿಗೆ ಮೇಲ್ಮನವಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಕೋರ್ಟ್ 2014ರಲ್ಲಿ ಆರೋಪಿ ಐತಪ್ಪ ನಾಯ್ಕನಿಗೆ ಎರಡು ವರ್ಷಗಳ ಶಿಕ್ಷೆ ವಿಧಿಸಿ ತೀರ್ಪು ಕೊಟ್ಟಿತ್ತು.

ಇದನ್ನೂ ಓದಿ :ಶಾಸಕ ಮಾಡಾಳ್ ವಿರೂಪಾಕ್ಷಪ್ಪರನ್ನು ಸರ್ಕಾರವೇ ರಕ್ಷಣೆ ಮಾಡುತ್ತಿದೆ: ಸಿದ್ದರಾಮಯ್ಯ

ಅಂಗನವಾಡಿಯಲ್ಲಿ ವೇತನ ಇಲ್ಲದೇ ಸೇವೆ ಮಾಡುವಂತೆ ಆದೇಶ: ಮಂಗಳೂರಿನ ಜಿಲ್ಲಾ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಐತಪ್ಪ ನಾಯ್ಕ ಪರ ವಕೀಲರು ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಮಕ್ಕಳಿಲ್ಲದ ವೃದ್ಧ ಮತ್ತು ಮನೆಯಲ್ಲಿ ಪತ್ನಿ ಒಬ್ಬಂಟಿಯಾಗಿರುವುದರಿಂದ ವಯಸ್ಸನ್ನು ನೋಡಿ ಶಿಕ್ಷೆಗೆ ವಿನಾಯ್ತಿ ನೀಡಬೇಕೆಂದು ವಕೀಲರು ಕೋರಿದ್ದರು. ಆರೋಪಿ ಐತಪ್ಪ ನಾಯ್ಕ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಲ್ಲದೆ, ಪಶ್ಚಾತ್ತಾಪ ವ್ಯಕ್ತಪಡಿಸಿದ್ದರಿಂದ ನ್ಯಾಯಾಧೀಶರು ಕೆಳಗಿನ ಕೋರ್ಟಿನ ಶಿಕ್ಷೆಯನ್ನು ರದ್ದುಗೊಳಿಸಿದ್ದಾರೆ. ಅದರ ಬದಲಿಗೆ ಒಂದು ವರ್ಷ ಕಾಲ ಸ್ಥಳೀಯ ಅಂಗನವಾಡಿಯಲ್ಲಿ ವೇತನ ಇಲ್ಲದೇ ಸೇವೆ ಮಾಡುವಂತೆ ಆದೇಶ ಮಾಡಿದ್ದಾರೆ. ಅದರಂತೆ, ಕರೋಪಾಡಿ ಗ್ರಾಮದ ಅಂಗನವಾಡಿಯಲ್ಲಿ ವೃದ್ಧ ಐತಪ್ಪ ನಾಯ್ಕ ಈಗ ಶುಚಿತ್ವದ ಕೆಲಸ ಆರಂಭಿಸಿದ್ದಾರೆ.

ಇದನ್ನೂ ಓದಿ :ಹೋಮಿಯೋಪತಿ ವೈದ್ಯಕೀಯ ಕೋರ್ಸ್‌ಗಳಿಗೆ ನೀಟ್ ಕಡ್ಡಾಯ ಪದ್ಧತಿ ಎತ್ತಿ ಹಿಡಿದ ಹೈಕೋರ್ಟ್

ಅಪರೂಪದ ತೀರ್ಪಿನಿಂದ ವೃದ್ಧ ದಂಪತಿ ಬಾಳಲ್ಲಿ ಆಶಾಭಾವ:ಐತಪ್ಪ ನಾಯ್ಕನಿಗೆ ಬಂಟ್ವಾಳದ ವಕೀಲರೊಬ್ಬರು ಸಹಾಯ ಹಸ್ತ ನೀಡಿದ್ದು, ಹೈಕೋರ್ಟಿನಲ್ಲಿ ವಾದಿಸಿ ನ್ಯಾಯ ದೊರಕಿಸಿದ್ದಾರೆ. ಇಳಿ ವಯಸ್ಸಿನಲ್ಲಿ ಜೈಲು ಸೇರುವ ಬದಲು ಮನೆ ಬಳಿಯಲ್ಲೇ ಅಂಗನವಾಡಿ ಸೇವೆಗೆ ಜೋಡಿಸುವ ಕೆಲಸ ಮಾಡಿದ್ದಾರೆ. ಹೈಕೋರ್ಟ್ ನೀಡಿರುವ ಈ ರೀತಿಯ ಅಪರೂಪದ ತೀರ್ಪು ವೃದ್ಧ ದಂಪತಿಯ ಬಾಳಲ್ಲಿ ಬದುಕಿನ ಆಶಾಭಾವ ಮೂಡಿಸಿದೆ.

ಇದನ್ನೂ ಓದಿ :ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಮಾಡಾಳ್ ವಿರುಪಾಕ್ಷಪ್ಪ

ABOUT THE AUTHOR

...view details