ಕರ್ನಾಟಕ

karnataka

ETV Bharat / state

ಪುತ್ತೂರಿನಲ್ಲಿ ಹಿಂದೂ ಜಾಗರಣ ವೇದಿಕೆ ಮುಖಂಡನ ಹತ್ಯೆ - ಹಿಂದೂ ಜಾಗರಣ ವೇದಿಕೆ

ಪುತ್ತೂರು ಸಂಪ್ಯ ಪೊಲೀಸ್ ಠಾಣೆಯ ಮುಂಭಾಗದಲ್ಲಿ ನಡೆದ ಗಣೇಶೋತ್ಸವ ಕಾರ್ಯಕ್ರಮದಲ್ಲಿ, ಹಿಂದೂ ಜಾಗರಣ ವೇದಿಕೆಯ ಕಾರ್ಯದರ್ಶಿ ಕಾರ್ತಿಕ್ ಮೇರ್ಲ ಎಂಬುವರನ್ನು ದುಷ್ಕರ್ಮಿಗಳು ಹತ್ಯೆಗೈದಿದ್ದಾರೆ.

ಹಿಂದೂ ಜಾಗರಣ ವೇದಿಕೆ ಮುಖಂಡನ ಹತ್ಯೆ

By

Published : Sep 4, 2019, 9:14 AM IST

ಮಂಗಳೂರು: ಪುತ್ತೂರಿನಲ್ಲಿ ನಡೆಯುತ್ತಿದ್ದ ಗಣೇಶೋತ್ಸವ ಕಾರ್ಯಕ್ರಮದ ವೇಳೆ ಪುತ್ತೂರು ಹಿಂದೂ ಜಾಗರಣ ವೇದಿಕೆಯ ಕಾರ್ಯದರ್ಶಿ ಕಾರ್ತಿಕ್ ಮೇರ್ಲ ಎಂಬುವರನ್ನು ದುಷ್ಕರ್ಮಿಗಳು ಹತ್ಯೆಗೈದಿದ್ದಾರೆ.

ಪುತ್ತೂರು ಸಂಪ್ಯ ಪೊಲೀಸ್ ಠಾಣೆಯ ಮುಂಭಾಗದಲ್ಲಿ ನಡೆದ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದೆ. ಕಾರ್ತಿಕ್ ಮೇರ್ಲ ಅವರು ಗಣೇಶೋತ್ಸವ ಕಾರ್ಯಕ್ರಮದಲ್ಲಿದ್ದ ವೇಳೆ ತಡರಾತ್ರಿ ಬಂದ ದುಷ್ಕರ್ಮಿಗಳು ಚೂರಿಯಿಂದ ಅವರ ಎದೆಗೆ ಇರಿದಿದ್ದಾರೆ.

ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಅದಾಗಲೇ ಅವರು ಮೃತಪಟ್ಟಿದ್ದರು. ಈ ಸಂಬಂಧ ಪುತ್ತೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details