ಪುತ್ತೂರು:ಅಕ್ರಮ ಗೋ ಸಾಗಾಟ, ಗೋಹತ್ಯೆ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಆಗ್ರಹಿಸಿ ವಿಶ್ವ ಹಿಂದೂ ಪರಿಷತ್, ಭಜರಂಗದಳ ಕಾರ್ಯಕರ್ತರು ಸಹಾಯಕ ಕಮಿಷನರ್ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಅಕ್ರಮ ಗೋ ಸಾಗಾಟ, ಗೋಹತ್ಯೆ ತಡೆಗಟ್ಟಿ; ವಿಎಚ್ಪಿ, ಭಜರಂಗದಳ ಆಗ್ರಹ - Hindu parishath, Bajrang Dal
ಅಕ್ರಮ ಗೋ ಸಾಗಾಟ ಹಾಗೂ ಗೋ ಹತ್ಯೆ ನಡೆಸುತ್ತಿರುವವರ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿ ವಿಶ್ವ ಹಿಂದೂ ಪರಿಷತ್, ಭಜರಂಗದಳ ಕಾರ್ಯಕರ್ತರು ಸಹಾಯಕ ಕಮಿಷನರ್ ಮೂಲಕ ಡಿಸಿಗೆ ಮನವಿ ಸಲ್ಲಿಸಿದರು.
ಮುಂದಿನ ಬಕ್ರೀದ್ ಸಂದರ್ಭದಲ್ಲಿ ಇಷ್ಟು ವರ್ಷಗಳ ಅನುಭವದಂತೆ, ಬೃಹತ್ ಪ್ರಮಾಣದಲ್ಲಿ ಕಾನೂನು ಬಾಹಿರ ಪ್ರಾಣಿಗಳ ಅಕ್ರಮ ಸಾಗಾಟ ಹಾಗೂ ಬಲಿ ನಡೆಯುವ ಸಾಧ್ಯತೆ ಇದ್ದು, ಇದರ ಬಗ್ಗೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಪುತ್ತೂರು ಉಪವಿಭಾಗ ಸಹಾಯಕ ಕಮೀಷನರ್ ಮೂಲಕ ವಿಶ್ವ ಹಿಂದೂ ಪರಿಷತ್, ಭಜರಂಗದಳ ವತಿಯಿಂದ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ ಪುತ್ತೂರು ಜಿಲ್ಲಾ ಅಧ್ಯಕ್ಷರಾದ ಡಾ. ಕೃಷ್ಣ ಪ್ರಸನ್ನ, ಭಜರಂಗದಳ ಪುತ್ತೂರು ಜಿಲ್ಲಾ ಸಂಚಾಲಕ ಶ್ರೀಧರ್ ತೆಂಕಿಲ, ಭಜರಂಗದಳ ಪುತ್ತೂರು ಜಿಲ್ಲಾ ಸಾಪ್ತಾಹಿಕ ಮಿಲನ್ ಪ್ರಮುಖ ಜಿತೇಶ್ ಬಲ್ನಾಡ್ ಉಪಸ್ಥಿತರಿದ್ದರು.