ಸುಬ್ರಹ್ಮಣ್ಯ(ದ.ಕ.):ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಪ್ರಭಾರ ಕಾರ್ಯನಿರ್ವಹಣಾಧಿಕಾರಿಯಾಗಿ ಪುತ್ತೂರು ಸಹಾಯಕ ಕಮೀಷನರ್ ಆದ ಹೆಚ್.ಕೆ. ಕೃಷ್ಣಮೂರ್ತಿ ಅವರು ನೇಮಕಗೊಂಡಿದ್ದಾರೆ.
ಕುಕ್ಕೆ ಸುಬ್ರಹ್ಮಣ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಹೆಚ್.ಕೆ. ಕೃಷ್ಣಮೂರ್ತಿ ನೇಮಕ - ಕಾರ್ಯನಿರ್ವಹಣಾಧಿಕಾರಿ
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಪ್ರಭಾರ ಕಾರ್ಯ ನಿರ್ವಹಣಾಧಿಕಾರಿಯಾಗಿ ಪುತ್ತೂರು ಸಹಾಯಕ ಕಮೀಷನರ್ ಆದ ಹೆಚ್.ಕೆ. ಕೃಷ್ಣಮೂರ್ತಿ ಅವರು ನೇಮಕಗೊಂಡಿದ್ದಾರೆ.

ಹೆಚ್.ಕೆ ಕೃಷ್ಣಮೂರ್ತಿ
ಇದುವರೆಗೆ ಕುಕ್ಕೆಯಲ್ಲಿ ಕಾರ್ಯನಿರ್ವಹಣಾಧಿಕಾರಿಯಾಗಿದ್ದ ರವೀಂದ್ರ ಅವರು ನಂಜನಗೂಡು ಶ್ರೀಕಂಠೇಶ್ವರ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿಯಾಗಿ ವರ್ಗಾವಣೆಗೊಂಡಿದ್ದಾರೆ. ರವೀಂದ್ರ ಅವರಿಗೆ ಈ ಹಿಂದೆಯೇ ವರ್ಗಾವಣೆ ಪ್ರಕ್ರಿಯೆ ಆಗಿದ್ದರೂ, ಇದೀಗ ಆದೇಶ ಜಾರಿಯಾಗಿದೆ. ಹೆಚ್.ಕೆ. ಕೃಷ್ಣಮೂರ್ತಿ ಇಂದು ಅಧಿಕೃತವಾಗಿ ಅಧಿಕಾರ ವಹಿಸಿಕೊಳ್ಳುವ ಸಾಧ್ಯತೆ ಇದೆ.