ಕರ್ನಾಟಕ

karnataka

ETV Bharat / state

ಸುಳ್ಯ, ಕಡಬ ತಾಲೂಕಿನಲ್ಲಿ ಮೇಘಸ್ಫೋಟ: ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ - Holiday announcement for schools and colleges in Sulya and Kadaba taluk

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಮತ್ತು ಕಡಬ ತಾಲೂಕಿನಲ್ಲಿ ಸುರಿದ ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಕಡಬ ಮತ್ತು ಸುಳ್ಯ ತಾಲೂಕಿನಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

holiday-announcement-for-schools-and-colleges-of-sulya-and-kadaba-taluk
ಸುಳ್ಯ, ಕಡಬ ತಾಲೂಕಿನಲ್ಲಿ ಮೇಘಸ್ಪೋಟ : ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

By

Published : Aug 2, 2022, 8:44 AM IST

ಕಡಬ (ದಕ್ಷಿಣ ಕನ್ನಡ): ಜಿಲ್ಲೆಯ ಸುಳ್ಯ ಮತ್ತು ಕಡಬ ತಾಲೂಕಿನ ಹಲವೆಡೆ ಮೇಘ ಸ್ಫೋಟ ಉಂಟಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಭಾರಿ ಮಳೆಗೆ ಇಲ್ಲಿನ ಹಲವು ಗ್ರಾಮಗಳು ದ್ವೀಪದಂತಾಗಿದೆ. ನಿನ್ನೆ ಸುರಿದ ಭಾರಿ ಮಳೆಗೆ ಸುಬ್ರಹ್ಮಣ್ಯದ ಕುಮಾರಧಾರ ಪರ್ವತಮುಖಿಯಲ್ಲಿ ಮನೆ ಮೇಲೆ ಗುಡ್ಡಕುಸಿದು ಕುಸುಮಧಾರ ಮತ್ತು ರೂಪಾಶ್ರೀ ದಂಪತಿಯ ಮಕ್ಕಳಾದ ಶೃತಿ (11) ಮತ್ತು ಜ್ಞಾನಶ್ರೀ (6) ಮಣ್ಣಿನಡಿ ಸಿಲುಕಿ ಮೃತಪಟ್ಟಿದ್ದಾರೆ. ಮೃತದೇಹಗಳನ್ನು ಕಡಬ ಸಮುದಾಯ ಆಸ್ಪತ್ರೆಯಲ್ಲಿ ಇರಿಸಲಾಗಿದೆ.

ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿಗಳು ನಿನ್ನೆ ರಾತ್ರಿಯೇ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಇಂದು ಮುನ್ನೆಚ್ಚರಿಕಾ ಕ್ರಮವಾಗಿ ಕಡಬ, ಸುಳ್ಯ ತಾಲೂಕಿನಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜೊತೆಗೆ ಕುಕ್ಕೆ ಸುಬ್ರಮಣ್ಯಕ್ಕೆ ಭಕ್ತರು ಭೇಟಿ ನೀಡದಂತೆ ವಿನಂತಿ ಮಾಡಿಕೊಳ್ಳಲಾಗಿದೆ.

ಭಾರಿ ಮಳೆಗೆ ಕಿರು ಸೇತುವೆಗಳು ಮುಳುಗಡೆಗೊಂಡಿದ್ದು, ಇಲ್ಲಿನ ಗ್ರಾಮಗಳಿಗೆ ಹೊರಗಿನ ಸಂಪರ್ಕ ಕಡಿತವಾಗಿದೆ. ವಿದ್ಯುತ್ ಸಂಪರ್ಕ ಕಡಿತಗೊಂಡು ಜನರು ಪರದಾಡುವಂತಾಗಿದೆ. ಸದ್ಯ ಸ್ಥಳದಲ್ಲಿ ಎನ್.ಡಿ.ಆರ್.ಎಫ್ ಮತ್ತು ಎಸ್.ಡಿ.ಆರ್.ಎಫ್ ಪಡೆಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿದ್ದಾರೆ.

ಓದಿ :ಸುಬ್ರಮಣ್ಯದಲ್ಲಿ ಭಾರಿ ಮಳೆ: ಮನೆ ಮೇಲೆ ಗುಡ್ಡ ಕುಸಿದು ಇಬ್ಬರು ಮಕ್ಕಳು ಸಾವು

ABOUT THE AUTHOR

...view details