ಕರ್ನಾಟಕ

karnataka

ETV Bharat / state

ಅಮೆರಿಕದ ವೆಲ್​ನೆಸ್ ವಿವಿಯಿಂದ ವೀರೇಂದ್ರ ಹೆಗ್ಗಡೆಯವರಿಗೆ ಗೌರವ ಡಾಕ್ಟರೇಟ್ ಪ್ರದಾನ

ವೈದ್ಯಕೀಯ ಚಿಕಿತ್ಸೆಯಲ್ಲಿ ವಿವಿಧ ಪದ್ಧತಿಗಳ ಮಧ್ಯೆ ಸ್ಪರ್ಧೆ ಸಲ್ಲದು. ಪರಸ್ಪರ ಪೂರಕವಾಗಿ ಚಿಕಿತ್ಸೆ ನೀಡಿ ರೋಗಿಯ ಯೋಗ ಕ್ಷೇಮದೊಂದಿಗೆ ಆರೋಗ್ಯ ಭಾಗ್ಯ ರಕ್ಷಣೆಯೇ ವೈದ್ಯರ ಗುರಿಯಾಗಬೇಕು. ಈ ಕಾರಣಕ್ಕಾಗೆ ವಿಶ್ವದಲ್ಲೇ ಪ್ರಥಮವಾಗಿ ತಾವು ಧರ್ಮಸ್ಥಳ ಮತ್ತು ಉಜಿರೆಯಲ್ಲಿ ಪ್ರಕೃತಿ ಚಿಕಿತ್ಸಾ ಹಾಗೂ ಯೋಗ ವಿಜ್ಞಾನ ಕಾಲೇಜು ಮತ್ತು ಆಸ್ಪತ್ರೆಯನ್ನು ಆರಂಭಿಸಿರುವುದಾಗಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಹೇಳಿದರು.

ಅಮೆರಿಕಾದ ವೆಲ್​ನೆಸ್ ವಿವಿಯಿಂದ ವೀರೇಂದ್ರ ಹೆಗ್ಗಡೆಯವರಿಗೆ ಗೌರವ ಡಾಕ್ಟರೇಟ್ ಪ್ರದಾನ
ಅಮೆರಿಕಾದ ವೆಲ್​ನೆಸ್ ವಿವಿಯಿಂದ ವೀರೇಂದ್ರ ಹೆಗ್ಗಡೆಯವರಿಗೆ ಗೌರವ ಡಾಕ್ಟರೇಟ್ ಪ್ರದಾನ

By

Published : Nov 7, 2021, 7:41 AM IST

ಬೆಳ್ತಂಗಡಿ(ದಕ್ಷಿಣ ಕನ್ನಡ): ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರು ಜಾಗತಿಕ ಮಟ್ಟದಲ್ಲಿ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕ್ಷೇತ್ರದಲ್ಲಿ ಮಾಡಿದ ಸೇವೆ, ಸಾಧನೆಯನ್ನು ಗುರುತಿಸಿ ಅಮೆರಿಕದ ವೆಲ್‍ನೆಸ್ ವಿಶ್ವವಿದ್ಯಾಲಯದ ವತಿಯಿಂದ ಧರ್ಮಸ್ಥಳದ ಮಹೋತ್ಸವ ಸಭಾ ಭವನದಲ್ಲಿ ನಡೆದ ಸಮಾರಂಭದಲ್ಲಿ ಆಚಾರ್ಯ ಪದವಿಯೊಂದಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಯಿತು.

ಈ ಸಂದರ್ಭದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ, ವಿಶ್ವ ಕಲ್ಯಾಣವೇ ನಮ್ಮ ಗುರಿಯಾಗಬೇಕು. ಸಮಸ್ತ ಮಾನವ ಕಲ್ಯಾಣ ಹಾಗೂ ಸಂತೋಷವೇ ಎಲ್ಲಾ ಸೇವೆಗಳ ಮುಖ್ಯ ಉದ್ದೇಶವಾಗಿದೆ ಎಂದು ಹೇಳಿದರು.

ವೈದ್ಯಕೀಯ ಚಿಕಿತ್ಸೆಯಲ್ಲಿ ವಿವಿಧ ಪದ್ಧತಿಗಳ ಮಧ್ಯೆ ಸ್ಪರ್ಧೆ ಸಲ್ಲದು. ಪರಸ್ಪರ ಪೂರಕವಾಗಿ ಚಿಕಿತ್ಸೆ ನೀಡಿ ರೋಗಿಯ ಯೋಗ ಕ್ಷೇಮದೊಂದಿಗೆ ಆರೋಗ್ಯ ಭಾಗ್ಯ ರಕ್ಷಣೆಯೇ ವೈದ್ಯರ ಗುರಿಯಾಗಬೇಕು ಈ ಕಾರಣಕ್ಕಾಗೆ ವಿಶ್ವದಲ್ಲೇ ಪ್ರಥಮವಾಗಿ ತಾವು ಧರ್ಮಸ್ಥಳ ಮತ್ತು ಉಜಿರೆಯಲ್ಲಿ ಪ್ರಕೃತಿ ಚಿಕಿತ್ಸಾ ಹಾಗೂ ಯೋಗ ವಿಜ್ಞಾನ ಕಾಲೇಜು ಮತ್ತು ಆಸ್ಪತ್ರೆಯನ್ನು ಆರಂಭಿಸಿರುವುದಾಗಿ ಹೇಳಿದರು.

ಧಾರವಾಡದಲ್ಲಿರುವ ಅಲೋಪತಿ ಆಸ್ಪತ್ರೆಯಲ್ಲಿ ಕೂಡಾ ಆಯುರ್ವೇದ, ಯೋಗ ಮತ್ತು ಪ್ರಕೃತಿ ಚಿಕಿತ್ಸಾ ವಿಭಾಗಗಳನ್ನು ಪ್ರಾರಂಭಿಸಿರುವುದಾಗಿ ಅವರು ತಿಳಿಸಿದ ಅವರು, ನಮ್ಮ ಧರ್ಮ, ಸಂಸ್ಕೃತಿ ಮತ್ತು ಪರಂಪರೆಯನ್ನು ಕಡೆಗಣಿಸಬಾರದು. ಧರ್ಮಸ್ಥಳದಲ್ಲಿ ಜನರ ದೈಹಿಕ, ಮಾನಸಿಕ ಹಾಗೂ ಆಧ್ಯಾತ್ಮಿಕ ಆರೋಗ್ಯ ಭಾಗ್ಯ ರಕ್ಷಣೆಗೆ ನಿರಂತರ ಮಾರ್ಗದರ್ಶನದೊಂದಿಗೆ ಅಭಯದಾನ ನೀಡಲಾಗುತ್ತದೆ ಎಂದು ಹೇಳಿದರು.

ABOUT THE AUTHOR

...view details