ಕರ್ನಾಟಕ

karnataka

ETV Bharat / state

ಸುಬ್ರಮಣ್ಯ: ಅತಿಥಿಯಾಗಿ ಮನೆಗೆ ಬಂದು ಯಜಮಾನನಿಗೆ ಇರಿದು ಪರಾರಿ - House owner murder case

ನಿನ್ನೆ ಮಧ್ಯಾಹ್ನ 3-4 ಗಂಟೆ ವೇಳೆಗೆ ಮನೆಗೆ ಬಂದಿದ್ದ ವ್ಯಕ್ತಿ ರಬ್ಬರ್ ಟ್ಯಾಪಿಂಗ್ ಮಾಡುವ ಕತ್ತಿಯಿಂದ ಮನೆ ಯಜಮಾನನಿಗೆ ನಾಲ್ಕೈದು ಬಾರಿ ಇರಿದಿದ್ದಾನೆ ಎಂದು ತಿಳಿದುಬಂದಿದೆ.

ಕೊಲೆ
ಕೊಲೆ

By

Published : Jul 3, 2022, 9:58 AM IST

ಸುಬ್ರಮಣ್ಯ: ಅತಿಥಿಯಾಗಿ ವ್ಯಕ್ತಿಯೊಬ್ಬರ ಮನೆಗೆ ಬಂದಿದ್ದಾತ ಕ್ಷುಲ್ಲಕ ವಿಚಾರಕ್ಕೆ ಜಗಳ ತೆಗೆದು ಮನೆಯ ಯಜಮಾನನಿಗೆ ಕತ್ತಿಯಿಂದ ಇರಿದು ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿಯ ಕೊಲ್ಲಮೊಗ್ರ ಗ್ರಾಮದ ತೋಟದ ಮಜಲು‌ ಎಂಬಲ್ಲಿ ನಡೆದಿದೆ.

ಗಂಭೀರವಾಗಿ ಗಾಯಗೊಂಡ ವ್ಯಕ್ತಿಯನ್ನು ತೋಟದ ಮಜಲು ನಿವಾಸಿ ಲೂಕೋಸ್ ಎಂದು ಗುರುತಿಸಲಾಗಿದೆ. ಕೇರಳ ಮೂಲದ ಲೂಕೋಸ್, ಕಳೆದ ಎಂಟು ವರ್ಷಗಳ ಹಿಂದೆ ಕೊಲ್ಲಮೊಗ್ರ ಗ್ರಾಮದ ತೋಟದ ಮಜಲು ಎಂಬಲ್ಲಿ ಜಾಗ ಖರೀದಿಸಿ ಸಂಸಾರಸಮೇತರಾಗಿ ವಾಸವಾಗಿದ್ದರು. ಆದರೆ, ಕಳೆದ ಎರಡು ವರ್ಷದ ಹಿಂದೆ ಪತ್ನಿ ಬಿಟ್ಟು ಹೋಗಿದ್ದು, ನಂತರದಲ್ಲಿ ಒಬ್ಬಂಟಿಯಾಗಿ ಜೀವಿಸುತ್ತಿದ್ದರು. ವಾರದ ಹಿಂದೆ ಲೂಕೋಸ್ ಅವರ ಮನೆಗೆ ಅತಿಥಿಯೊಬ್ಬ ಬಂದಿದ್ದು, ಇವರ ಮನೆಯಲ್ಲೇ ವಾಸವಾಗಿದ್ದ.‌ ನಿನ್ನೆ ಮುಂಜಾನೆ ವೇಳೆ ಇಬ್ಬರೂ ಗುತ್ತಿಗಾರಿಗೆ ತೆರಳಿದ್ದು, ಬಳಿಕ ಮನೆಗೆ ವಾಪಸ್​ ಆಗಿದ್ದರು.

ನಿನ್ನೆ ಮಧ್ಯಾಹ್ನ 3-4 ಗಂಟೆಯ ವೇಳೆಗೆ ಅತಿಥಿಯಾಗಿ ಮನೆಗೆ ಬಂದಿದ್ದಾತ ರಬ್ಬರ್ ಟ್ಯಾಪಿಂಗ್ ಮಾಡುವ ಕತ್ತಿಯಿಂದ ಲೂಕೋಸ್​ಗೆ ನಾಲ್ಕೈದು ಬಾರಿ ಇರಿದು ಬಳಿಕ ಪರಾರಿಯಾಗಿದ್ದಾನೆ‌. ಗಾಯಗೊಂಡ ಲೂಕೋಸ್ ಪಕ್ಕದ ಮನೆಗೆ ಓಡಿಹೋಗಿದ್ದು, ಅಲ್ಲಿ ಕುಸಿದು ಬಿದ್ದಿದ್ದಾನೆ ಎನ್ನಲಾಗಿದೆ. ಬಳಿಕ ಸ್ಥಳೀಯರು ಸುಬ್ರಮಣ್ಯ ಪೊಲೀಸರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ.

ಸುಬ್ರಹ್ಮಣ್ಯ ಠಾಣಾಧಿಕಾರಿ ಜಂಬುರಾಜ್ ಮಹಾಜನ್ ಘಟನಾ ಸ್ಥಳಕ್ಕೆ ಆಗಮಿಸಿ, ಗಾಯಾಳುವನ್ನು ಸುಳ್ಯದ ಕೆ.ವಿ.ಜಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆರೋಪಿಗೆ ಶೋಧ ನಡೆಯುತ್ತಿದೆ.

ಇದನ್ನೂ ಓದಿ:ಮನೆ ಓಣಿ ಅಳತೆ ವಿಚಾರವಾಗಿ ಮಾರಣಾಂತಿಕ ಹಲ್ಲೆ: ಐವರಿಗೆ 3 ವರ್ಷ ಕಠಿಣ ಶಿಕ್ಷೆ

ABOUT THE AUTHOR

...view details