ಬೆಳ್ತಂಗಡಿ:ದರೋಡೆಕೋರರು ಮನೆಗೆ ನುಗ್ಗಿ ಚಿನ್ನಾಭರಣ, ನಗದು ದರೋಡೆ ಮಾಡಿದ ಘಟನೆ ತಾಲೂಕಿನ ಕೊಕ್ಕಡ ಸಮೀಪದ ಕೌಕ್ರಾಡಿ ಗ್ರಾಮದಲ್ಲಿ ನಡೆದಿದೆ.
ಸೌತಡ್ಕ ದೇವಸ್ಥಾನಕ್ಕೆ ತೆರಳುವ ರಸ್ತೆ ಸಮೀಪದ ವಿಶ್ವಹಿಂದೂ ಪರಿಷತ್ನ ಕೊಕ್ಕಡ ವಲಯ ಅಧ್ಯಕ್ಷರಾಗಿದ್ದ ನೂಜೆ ತುಕ್ರಪ್ಪ ಶೆಟ್ಟಿಯವರ ಮನೆಗೆ ಸುಮಾರು 9 ಮಂದಿ ದರೋಡೆಕೋರರ ತಂಡ ಸೋಮವಾರ ಸುಮಾರು ಮಧ್ಯರಾತ್ರಿ 2.30 ಕ್ಕೆ ನುಗ್ಗಿ ಮನೆಯ ಯಜಮಾನ ಮತ್ತು ಅವರ ಪತ್ನಿ ಮೇಲೆ ಹಲ್ಲೆ ನಡೆಸಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ದೋಚಿದ್ದಾರೆ. ಒಂಬತ್ತು ಮಂದಿ ಇದ್ದ ದರೋಡೆಕೋರರ ತಂಡ ಇವರನ್ನು ಸ್ಥಳದಲ್ಲೇ ಕೂಡಿ ಹಾಕಿ ಹಲ್ಲೆ ನಡೆಸಿದ ಸಂದರ್ಭ ತುಕ್ರಪ್ಪ ಶೆಟ್ಟಿಯವರ ಪತ್ನಿಗೆ ಚೂರಿಯಿಂದ ಹೊಟ್ಟೆಗೆ ಎರಡು ಬಾರಿ ಇರಿದಿದ್ದು, ತೀವ್ರ ಗಾಯಗಳಾಗಿವೆ. ಕೂಡಲೇ ಇವರನ್ನು ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.