ಉಳ್ಳಾಲ (ದಕ್ಷಿಣ ಕನ್ನಡ) :ಹರೇಕಳ ಗ್ರಾಮದಲ್ಲಿ ಇಂದು ಸಂಜೆ 6.50ರ ವೇಳೆ ಮನೆಯೊಂದರ ಅಡುಗೆ ಮನೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕ ಮೂಡಿಸಿದ ಘಟನೆ ನಡೆದಿದೆ. ಪರಿಣಾಮ ಘಟನೆಯಲ್ಲಿ ಸಂಪೂರ್ಣ ಮನೆ ಸುಟ್ಟು ಕರಕಳಲಾಗಿದ್ದು, ಈ ವೇಳೆ ಯಾವುದೇ ಪ್ರಾಣಿ ಹಾನಿ ಸಂಭವಿಸಿಲ್ಲ.
ದೇರಿಕಟ್ಟೆ ನಿವಾಸಿಯಾದ ನೇಬಿಸ ಎಂಬುವರಿಗೆ ಸೇರಿದ ಮನೆಯಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದೆ. ರಂಜಾನ್ ಉಪವಾಸದ ಪ್ರಯುಕ್ತ ಇಫ್ತಾರ್ನಲ್ಲಿ ನಿರತವಾಗಿದ್ದ ಮನೆಯವರ ಸಮಯ ಪ್ರಜ್ಞೆಯಿಂದ ಯಾರಿಗೂ ಪ್ರಾಣ ಹಾನಿಯಾಗಿಲ್ಲ. ಆದರೆ ಮನೆಯು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದ್ದು, ಮನೆಯ ಪೀಠೋಪಕರಣಗಳು, ಪಾತ್ರೆಗಳು, ವಿದ್ಯುತ್ ಉಪಕರಣಗಳು, ಗೃಹೋಪಯೋಗಿ ಪರಿಕರಗಳು, ಮಕ್ಕಳ ಶಾಲಾ ಪಠ್ಯ ಪುಸ್ತಕ ಇನ್ನಿತರ ವಸ್ತುಗಳು ಸಂಪೂರ್ಣ ಭಸ್ಮವಾಗಿವೆ.