ಕರ್ನಾಟಕ

karnataka

ETV Bharat / state

ಗುದನಾಳದಲ್ಲಿ ಚಿನ್ನ ಸಾಗಾಟ! ಮಂಗಳೂರು ವಿಮಾನ ನಿಲ್ದಾಣದಲ್ಲಿ ಪತ್ತೆ - Kannada news

ಗುದನಾಳದಲ್ಲಿ ಭಾರಿ ಪ್ರಮಾಣದ ಚಿನ್ನ ಅಡಗಿಸಿಟ್ಟು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿ ಅಪಾರ ಪ್ರಮಾಣದ ಚಿನ್ನವನ್ನು ಮಂಗಳೂರು ಕಸ್ಟಮ್ಸ್‌ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಮಂಗಳೂರು ವಿಮಾನ ನಿಲ್ದಾಣ

By

Published : Jul 25, 2019, 7:39 PM IST

ಮಂಗಳೂರು:ದುಬೈನಿಂದ ಅಕ್ರಮವಾಗಿ ಭಾರಿ ಪ್ರಮಾಣದಲ್ಲಿ ಚಿನ್ನವನ್ನು ಗುದನಾಳದಲ್ಲಿ ಅಡಗಿಸಿಟ್ಟು ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಸೀಮಾ ಸುಂಕ ಅಧಿಕಾರಿಗಳು ಬಂಧಿಸಿದ್ದಾರೆ.

ಜುಲೈ 24 ರಂದು ದುಬೈನಿಂದ ಆಗಮಿಸಿದ ವಿಮಾನದಲ್ಲಿದ್ದ ಪ್ರಯಾಣಿಕ ತನ್ನ ಗುದನಾಳದಲ್ಲಿ ಚಿನ್ನ ಅಡಗಿಸಿಟ್ಟು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ. ವ್ಯಕ್ತಿಯನ್ನು ಪರಿಶೀಲಿಸುತ್ತಿದ್ದಾಗ 24 ಕ್ಯಾರೆಟ್ ಶುದ್ದತೆಯ 963 ಗ್ರಾಂ ಚಿನ್ನ ಪೇಸ್ಟ್ ರೂಪದಲ್ಲಿ ಸಿಕ್ಕಿದೆ. ಸುಮಾರು 34.18 ಲಕ್ಷ ರೂ‌ ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡ ಕಸ್ಟಮ್ಸ್‌ ಅಧಿಕಾರಿಗಳು ಆರೋಪಿಯನ್ನು ಬಂಧಿಸಿದ್ದಾರೆ.

ABOUT THE AUTHOR

...view details