ಬೆಳ್ತಂಗಡಿ :ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ವಿಚಾರ ತಿಳಿದು ಆಕೆಯ ಪತಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಂದು ಮಧ್ಯಾಹ್ನ ಕೊಕ್ಕಡ ಸಮೀಪದ ಪುತ್ಯೆ ಎಂಬಲ್ಲಿ ನಡೆದಿದೆ.
ಪತ್ನಿ ಆತ್ಮಹತ್ಯೆ ಸುದ್ದಿ ತಿಳಿದು ಪತಿ ಕೂಡ ಸೂಸೈಡ್‌ಗೆ ಯತ್ನ - beltangadi kokkada putya woman suicide
ಸುದ್ದಿ ತಿಳಿದು ಮನೆಗೆ ಬಂದ ಪತಿ ರಾಜೇಶ್ ಕೂಡ ಆತ್ಮಹತ್ಯೆಗೆ ಯತ್ನಿಸಿದ್ದು, ಸ್ಥಳೀಯರು ಅವರನ್ನು ರಕ್ಷಿಸಿದ್ದಾರೆ ಎಂದು ತಿಳಿದು ಬಂದಿದೆ. ಧರ್ಮಸ್ಥಳ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲಿಸಿದ್ದಾರೆ..
ಪತ್ನಿ ಆತ್ಮಹತ್ಯೆ
ಪುತ್ಯೆ ನಿವಾಸಿ ರಾಜೇಶ್ ಎಂಬುವರ ಪತ್ನಿ ರಶ್ಮಿತಾ(28) ಆತ್ಮಹತ್ಯೆ ಮಾಡಿಕೊಂಡವರು. ಮಧ್ಯಾಹ್ನ ಮನೆಯಲ್ಲಿ ಯಾರು ಇಲ್ಲದ ವೇಳೆ ರಶ್ಮಿತಾ ಮನೆಯ ಕೋಣೆಯೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಸುದ್ದಿ ತಿಳಿದು ಮನೆಗೆ ಬಂದ ಪತಿ ರಾಜೇಶ್ ಕೂಡ ಆತ್ಮಹತ್ಯೆಗೆ ಯತ್ನಿಸಿದ್ದು, ಸ್ಥಳೀಯರು ಅವರನ್ನು ರಕ್ಷಿಸಿದ್ದಾರೆ ಎಂದು ತಿಳಿದು ಬಂದಿದೆ. ಧರ್ಮಸ್ಥಳ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲಿಸಿದ್ದಾರೆ.