ಕರ್ನಾಟಕ

karnataka

ETV Bharat / state

ಕಾರಿನಲ್ಲಿ ಅಕ್ರಮವಾಗಿ ಗೋವುಗಳ ಸಾಗಣೆ: ಪೊಲೀಸರಿಂದ ಫೈರಿಂಗ್, ಆರೋಪಿಗಳು ಎಸ್ಕೇಪ್​​ - mangalru police firing

ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದ ವೇಳೆ ಆರೋಪಿಗಳನ್ನು ಬೆನ್ನತ್ತಿದ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ ಘಟನೆ ಮೂಡುಬಿದಿರೆಯ ಶಿರ್ತಾಡಿ ಬಳಿಯ ಹೌದಾಲ್​ನಲ್ಲಿ ನಡೆದಿದೆ.

Illegal cattle trafficking
ಕಾರಿನಲ್ಲಿ ಅಕ್ರಮ ಗೋಸಾಗಾಟ: ಬೆನ್ನತ್ತಿದ ಪೊಲೀಸರಿಂದ ಫೈರಿಂಗ್

By

Published : Oct 11, 2020, 9:59 AM IST

ಮಂಗಳೂರು: ಬೆಳ್ಳಂಬೆಳಗ್ಗೆ ಕಾರಿನಲ್ಲಿ ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದ ವೇಳೆ ಆರೋಪಿಗಳನ್ನು ಬೆನ್ನತ್ತಿದ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಮೂಡುಬಿದ್ರೆಯ ಶಿರ್ತಾಡಿ ಬಳಿಯ ಹೌದಾಲ್ ಎಂಬಲ್ಲಿ ಈ ಘಟನೆ ನಡೆದಿದೆ.

ಕಾರಿನಲ್ಲಿ ಐದು ದನಗಳನ್ನು ತುಂಬಿಸಿಕೊಂಡು ಶಿರ್ತಾಡಿ ಕಡೆಯಿಂದ ಹೌದಾಲ್ ಕಡೆಗೆ ಆರೋಪಿಗಳು ಬರುತ್ತಿದ್ದರು ಎನ್ನಲಾಗಿದೆ. ಈ ಸಂದರ್ಭ ಕಾರು ನಿಲ್ಲಿಸಲು ಸೂಚಿಸಿದ್ದಕ್ಕೆ ಪೊಲೀಸ್ ಜೀಪಿಗೆ ಡಿಕ್ಕಿ ಹೊಡೆಯಲು ಯತ್ನಿಸಿದ್ದಾರೆಂದು ತಿಳಿದು ಬಂದಿದೆ. ತಕ್ಷಣ ಕಾರನ್ನು ಬೆನ್ನಟ್ಟಿದ ಪೊಲೀಸ್ ಇನ್ಸ್​ಪೆಕ್ಟರ್ ದಿನೇಶ್ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ‌.

ಈ ಸಂದರ್ಭ ಕಾರು ಮತ್ತು ದನಗಳನ್ನು ಬಿಟ್ಟು ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ‌. ಪೊಲೀಸರು ಕಾರು ಮತ್ತು 5 ದನಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಮೂಡುಬಿದಿರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ABOUT THE AUTHOR

...view details