ಬೆಳ್ತಂಗಡಿ: ನಗರದಚಾರ್ಮಾಡಿ ಗೇಟ್ ಬಳಿ ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ಮೂವರನ್ನು ಬಂಧಿಸುವಲ್ಲಿ ಧರ್ಮಸ್ಥಳ ಪೊಲೀಸರು ಯಶಸ್ವಿಯಾಗಿದ್ದಾರೆ.
ಅಕ್ರಮ ಗೋ ಸಾಗಾಟ: ಮೂವರು ಆರೋಪಿಗಳ ಬಂಧನ - ಮೂವರು ಆರೋಪಿಗಳ ಬಂಧನ
ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಚಾರ್ಮಾಡಿ ಗೇಟ್ ಬಳಿ ಅಕ್ರಮ ಗೋ ಸಾಗಾಟ ವಾಹನವನ್ನು ವಶ ಪಡಿಸಿಕೊಂಡ ಪೊಲೀಸರು 3 ಮಂದಿಯನ್ನು ಬಂಧಿಸಿದ್ದಾರೆ.
ನರೇಶ್, ಮೊಹಮ್ಮದ್ ಅಜರುದ್ದೀನ್ ಬಿನ್ ಅಬ್ದುಲ್ ರಹಿಮಾನ್ ಮತ್ತು ಮಹಮ್ಮದ್ ಹಫೀಜ್ ಬಿನ್ ಮಹಮ್ಮದ್ ಇಬ್ರಾಹಿಂ ಬಂಧಿತ ಆರೋಪಿಗಳು. ಜೂ. 25ರ ಬೆಳಿಗ್ಗೆ ಧರ್ಮಸ್ಥಳ ಪೊಲೀಸ್ ಠಾಣಾ ಉಪನಿರೀಕ್ಷಕ ಪವನ್ ಕುಮಾರ್ ನಾಯಕ್ ಹಾಗೂ ಸಿಬ್ಬಂದಿಗಳು ಚಾರ್ಮಾಡಿ ಗೇಟ್ ಬಳಿ ವಾಹನ ತಪಾಸಣೆ ಮಾಡುತ್ತಿದ್ದರು. ಈ ವೇಳೆ ಚಿಕ್ಕಮಗಳೂರಿನಿಂದ ಮಂಗಳೂರು ಕಡೆಗೆ ಅನುಮಾನಸ್ಪದವಾಗಿ ಬರುತ್ತಿದ್ದ ಲಾರಿಯನ್ನು ತಪಾಸಣೆ ಮಾಡಿದಾಗ ಯಾವುದೇ ದಾಖಲೆಗಳಿಲ್ಲದೆ 11 ಗೋವುಗಳನ್ನು ಸಾಗಾಟ ಮಾಡುತ್ತಿರುವುದು ತಿಳಿದು ಬಂದಿದೆ. ತಕ್ಷಣ ಲಾರಿ ಚಾಲಕ ಸೇರಿದಂತೆ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಈ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.