ಮಂಗಳೂರು: ಬಜ್ಪೆಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 4,35,200 ರೂ. ಮೌಲ್ಯದ ವಿದೇಶಿ ಕರೆನ್ಸಿ ಪತ್ತೆ ಮಾಡಿ, ಆರೋಪಿಯನ್ನು ಬಂಧಿಸಲಾಗಿದೆ.
ಮಂಗಳೂರು ವಿಮಾನ ನಿಲ್ದಾಣದಲ್ಲಿ 4.35 ಲಕ್ಷ ರೂ. ಮೌಲ್ಯದ ಅಕ್ರಮ ವಿದೇಶಿ ಕರೆನ್ಸಿ ಪತ್ತೆ - ಮಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮ ವಿದೇಶ ಕರೆನ್ಸಿ ವಶ
ದುಬೈಗೆ ತೆರಳುತ್ತಿದ್ದ ವ್ಯಕ್ತಿಯೊಬ್ಬ ಅಕ್ರಮವಾಗಿ ಸಾಗಿಸುತ್ತಿದ್ದ ವಿದೇಶಿ ಕರೆನ್ಸಿಯನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ವಶಪಡಿಸಿಕೊಳ್ಳಲಾಗಿದೆ.
![ಮಂಗಳೂರು ವಿಮಾನ ನಿಲ್ದಾಣದಲ್ಲಿ 4.35 ಲಕ್ಷ ರೂ. ಮೌಲ್ಯದ ಅಕ್ರಮ ವಿದೇಶಿ ಕರೆನ್ಸಿ ಪತ್ತೆ Mangaluru airtport officials seized Illegal foreign currency](https://etvbharatimages.akamaized.net/etvbharat/prod-images/768-512-9916396-thumbnail-3x2-hrs.jpg)
ಮಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮ ವಿದೇಶ ಕರೆನ್ಸಿ ವಶ ಮಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮ ವಿದೇಶ ಕರೆನ್ಸಿ ವಶ
ಕೇರಳದ ಚಿತ್ತಾರಿ ಬಾರಿಕ್ಕಾಡ್ನ ತಾಜುದ್ದೀನ್ ಬಂಧಿತ ಆರೋಪಿ. ಈತ ಏರ್ ಇಂಡಿಯಾ ವಿಮಾನದಲ್ಲಿ ದುಬೈಗೆ ಪ್ರಯಾಣಿಸಲು ಗುರುವಾರ ಸಂಜೆ 4:30ರ ವೇಳೆಗೆ ವಿಮಾನ ನಿಲ್ದಾಣಕ್ಕೆ ಬಂದಿದ್ದ. ತಪಾಸಣೆ ವೇಳೆ ಆತ ಒಳ ಉಡುಪಿನಲ್ಲಿಟ್ಟು ಸಾಗಿಸುತ್ತಿದ್ದ ಯೂರೊ ಹಾಗೂ ಯುಎಇ ದಿರ್ಹಂ ಪತ್ತೆಯಾಗಿದೆ.
ಸಿಐಎಸ್‌ಎಫ್ ಅಧಿಕಾರಿ ದೇವೇಂದರ್ ಸಿಂಗ್ ತಪಾಸಣೆ ನಡೆಸಿ ಅಕ್ರಮ ಸಾಗಣೆ ಮಾಡುತ್ತಿದ್ದ ವಿದೇಶಿ ಕರೆನ್ಸಿ ಪತ್ತೆ ಮಾಡಿದ್ದಾರೆ. ಆರೋಪಿ ಮತ್ತು ವಶಪಡಿಸಿಕೊಂಡ ಕರೆನ್ಸಿಯನ್ನು ಮುಂದಿನ ತನಿಖೆಗೆ ಕಸ್ಟಮ್ಸ್ ಅಧಿಕಾರಿಗಳಿಗೆ ಹಸ್ತಾಂತರಿಸಲಾಗಿದೆ ಎಂದು ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ