ಮಂಗಳೂರು: 4.10 ಲಕ್ಷ ರೂ. ಮೌಲ್ಯದ ವಿದೇಶಿ ಕರೆನ್ಸಿ ಅಕ್ರಮವಾಗಿ ದುಬೈಗೆ ಸಾಗಿಸುತ್ತಿದ್ದ ಓರ್ವ ಆರೋಪಿಯನ್ನ ಮಂಗಳೂರು ವಿಮಾನ ನಿಲ್ದಾಣದಲ್ಲಿ ಕೇಂದ್ರೀಯ ಕೈಗಾರಿಕಾ ಭದ್ರತಾ ದಳದ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ.
ಅಕ್ರಮ ವಿದೇಶಿ ಕರೆನ್ಸಿ ಸಾಗಾಟ: ಓರ್ವನ ಬಂಧನ - Illegal Foreign Currency Shipping
4.10 ಲಕ್ಷ ರೂ. ಮೌಲ್ಯದ ವಿದೇಶಿ ಕರೆನ್ಸಿ ದುಬೈಗೆ ಸಾಗಿಸುತ್ತಿದ್ದ ಓರ್ವ ಆರೋಪಿಯನ್ನ ಮಂಗಳೂರು ವಿಮಾನ ನಿಲ್ದಾಣದಲ್ಲಿ ಕೇಂದ್ರೀಯ ಕೈಗಾರಿಕಾ ಭದ್ರತಾ ದಳದ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ.
ಅಕ್ರಮ ವಿದೇಶಿ ಕರೆನ್ಸಿ ಸಾಗಾಟ: ಓರ್ವನ ಬಂಧನ
ಅಬ್ದುಲ್ ರಜಾಕ್ ಬಂಧಿತ ಆರೋಪಿ. ಈತನಿಂದ 11,600 ಸೌದಿ ರಿಯಾಲ್ ಮತ್ತು 11,000 ಯುಎಇ ದಿರ್‌ಹಂಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಹಣದ ಒಟ್ಟು ಮೌಲ್ಯ 4.10 ಲಕ್ಷ ರೂ. ಎಂದು ತಿಳಿದು ಬಂದಿದೆ. ಅಬ್ದುಲ್ ರಜಾಕ್ ವಿದೇಶಿ ಕರೆನ್ಸಿಯನ್ನ ಒಳ ಉಡುಪಿನಲ್ಲಿಟ್ಟುಕೊಂಡು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದುಬೈಗೆ ಹೊರಟ್ಟಿದ್ದ. ಈ ಸಂದರ್ಭದಲ್ಲಿ ಭದ್ರತಾ ಸಿಬ್ಬಂದಿ ರಾಕೇಶ್ ಕುಮಾರ್ ಕಾರ್ಯಚರಣೆ ವೇಳೆ ಸಿಕ್ಕಿಬಿದ್ದಿದ್ದಾನೆ.
ಆರೋಪಿ ವಿರುದ್ಧ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಸಿಐಎಸ್‌ಎಫ್ ಅಧಿಕಾರಿಗಳು ತಿಳಿಸಿದ್ದಾರೆ.