ಕರ್ನಾಟಕ

karnataka

ETV Bharat / state

ಒಳ ಉಡುಪಿನಲ್ಲಿ ಅಕ್ರಮ ಚಿನ್ನ ಸಾಗಾಟ : ಮಂಗಳೂರು ವಿಮಾನ ನಿಲ್ದಾಣದಲ್ಲಿ ಓರ್ವನ ಬಂಧನ - ಮಂಗಳೂರಿನಲ್ಲಿ ಒಳ ಉಡುಪಿನಲ್ಲಿ ಅಕ್ರಮ ಚಿನ್ನ ಸಾಗಾಟ ಓರ್ವನ ಬಂಧನ

ತನ್ನ ಒಳ ಉಡುಪಿನಲ್ಲಿ ಪೌಡರ್ ರೂಪದಲ್ಲಿ ಚಿನ್ನ ಬಚ್ಚಿಟ್ಟು ಸಾಗಾಟ ಮಾಡುತ್ತಿದ್ದ, ಕೇರಳ ರಾಜ್ಯದ ಕಾಸರಗೋಡು ಮೂಲದ ಆರೋಪಿಯನ್ನ ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್​ ಅಧಿಕಾರಿಗಳು ಬಂಧಿಸಿದ್ದಾರೆ.

ಒಳ ಉಡುಪಿನಲ್ಲಿ ಅಕ್ರಮ ಚಿನ್ನ ಸಾಗಾಟ
ಒಳ ಉಡುಪಿನಲ್ಲಿ ಅಕ್ರಮ ಚಿನ್ನ ಸಾಗಾಟ

By

Published : Mar 26, 2021, 12:51 PM IST

ಮಂಗಳೂರು : ಒಳ ಉಡುಪಿನಲ್ಲಿ ಬಚ್ಚಿಟ್ಟು ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ಓರ್ವನನ್ನು ಮಂಗಳೂರು ಕಸ್ಟಮ್ಸ್​ ಅಧಿಕಾರಿಗಳು ಬಂಧಿಸಿದ್ದಾರೆ.

ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಇಸ್ಮಾಯಿಲ್ ಅಹಮದ್ ಕಲ್ಲಾರ್ ಬಂಧಿತ ಆರೋಪಿ. ಈತ ಇಂದು ದುಬೈನಿಂದ ಸ್ಪೈಸ್ ಜೆಟ್ ವಿಮಾನದಲ್ಲಿ ಮಂಗಳೂರಿಗೆ ಬಂದಿದ್ದ. ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿದಾಗ ಈತ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ.

ಓದಿ : 2 ಕೋಟಿ ಮೌಲ್ಯದ ಡ್ರಗ್ಸ್ ವಶ.. ತಂದೆ-ಮಗನನ್ನು ವಶಕ್ಕೆ ಪಡೆದ ಎನ್​ಸಿಬಿ

ಈತ ತನ್ನ ಒಳ ಉಡುಪಿನಲ್ಲಿ ಪೌಡರ್ ರೂಪದಲ್ಲಿ ಚಿನ್ನ ಬಚ್ಚಿಟ್ಟು ಸಾಗಾಟ ಮಾಡುತ್ತಿದ್ದ. 57,14,940 ರೂ. ಮೌಲ್ಯದ 1.23 ಕೆಜಿ‌ ಚಿನ್ನ ಮತ್ತು ಈತ ಧರಿಸಿದ್ದ ಚಿನ್ನದ ಸರವನ್ನು ವಶಪಡಿಸಿಕೊಳ್ಳಲಾಗಿದೆ.

ABOUT THE AUTHOR

...view details