ಮಂಗಳೂರು:ಕಳ್ಳಭಟ್ಟಿ ಸಾರಾಯಿ ದಂಧೆ ನಡೆಸುತ್ತಿದ್ದ ಇಬ್ಬರ ಮೇಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕಳ್ಳಭಟ್ಟಿ ಸಾರಾಯಿಯನ್ನು ವಶಪಡಿಸಿಕೊಂಡಿದ್ದಾರೆ.
ಬಾರ್ ತೆಗೆಯಲ್ಲ ಅಂತ ಕಳ್ಳಭಟ್ಟಿ ತಯಾರಿಸಿದ ಇಬ್ಬರ ವಿರುದ್ಧ ಪ್ರಕರಣ ದಾಖಲು - ದ.ಕ.ಜಿಲ್ಲೆಯಲ್ಲಿ ಸಂಪೂರ್ಣ ಲಾಕ್ ಡೌನ್
ದ.ಕ.ಜಿಲ್ಲೆಯಲ್ಲಿ ಸಂಪೂರ್ಣ ಲಾಕ್ ಡೌನ್ ಆಗಿರುವ ಹಿನ್ನೆಲೆಯಲ್ಲಿ ಮದ್ಯದಂಗಡಿಯೂ ಸಂಪೂರ್ಣ ಸ್ಥಗಿತಗೊಂಡಿದೆ. ಆದರೆ ಕಳ್ಳಭಟ್ಟಿ ಸಾರಾಯಿ ದಂಧೆ ಜೋರಾಗಿ ನಡೆಯಿತ್ತಿದೆ.
ದ.ಕ.ಜಿಲ್ಲೆಯಲ್ಲಿ ಸಂಪೂರ್ಣ ಲಾಕ್ ಡೌನ್ ಆಗಿರುವ ಹಿನ್ನೆಲೆಯಲ್ಲಿ ಮದ್ಯದಂಗಡಿಯೂ ಸಂಪೂರ್ಣ ಸ್ಥಗಿತಗೊಂಡಿದೆ. ಕಳ್ಳಭಟ್ಟಿ ಸಾರಾಯಿ ದಂಧೆ ಜೋರಾಗಿ ನಡೆಯಿತ್ತಿದೆ. ಈ ಹಿನ್ನೆಲೆಯಲ್ಲಿ ಅಬಕಾರಿ ಇಲಾಖೆ ತನಗೆ ದೊರೆತ ಖಚಿತ ಮಾಹಿತಿಯಂತೆ ಇಂದು ನಗರದ ವೆಲೆನ್ಸಿಯಾದಲ್ಲಿರುವ ಮನೆಯೊಂದಕ್ಕೆ ದಾಳಿ ನಡೆಸಿ 3.250 ಲೀಟರ್ ಕಳ್ಳಭಟ್ಟಿ ಸಾರಾಯಿ ಹಾಗೂ 3 ಲೀಟರ್ ನಕಲಿ ಅನ್ನು ವಶಪಡಿಸಿಕೊಂಡಿದೆ. ಅಲ್ಲದೆ ಹೋಂಡಾ ಆ್ಯಕ್ಟಿವ್ ಸ್ಕೂಟರ್ ಜಪ್ತಿಪಡಿಸಿ ರೋಹಿತ್ ಎಂಬಾತನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಎಪ್ರಿಲ್ 6ರಂದು ಇನ್ನೊಂದು ಪ್ರತ್ಯೇಕ ಪ್ರಕರಣದಲ್ಲಿ ಅಬಕಾರಿ ಇಲಾಖೆಯ ಪೊಲೀಸರು ಜಪ್ಪಿನಮೊಗರು ನ್ಯೂಪಡ್ಪು ಎಂಬಲ್ಲಿನ ಮನೆಯೊಂದಕ್ಕೆ ದಾಳಿ ನಡೆಸಿ 3.5 ಲೀಟರ್ ಕಳ್ಳಭಟ್ಟಿ ಸಾರಾಯಿ ಹಾಗೂ ಭಟ್ಟಿ ಸಾರಾಯಿ ತಯಾರಿಕಾ ಸಲಕರಣೆಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ರಿಚರ್ಡ್ ಡಿಸೋಜ ವಿರುದ್ಧ ಪ್ರಕರಣ ದಾಖಲಾಗಿದೆ.