ಮಂಗಳೂರು: ಕಳೆದ ಹತ್ತು ದಿನಗಳ ಅವಧಿಯಲ್ಲಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು 1.46 ಕೋಟಿ ರೂ ಮೌಲ್ಯದ ಅಕ್ರಮ ಚಿನ್ನ ಸಾಗಾಟವನ್ನು ಕಂಡು ಹಿಡಿದಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಅಕ್ಟೋಬರ್ 22 ರಿಂದ 31 ರವರೆಗೆ ಆರು ಪ್ರಕರಣಗಳನ್ನು ಕಸ್ಟಮ್ಸ್ ಅಧಿಕಾರಿಗಳು ದಾಖಲಿಸಿದ್ದಾರೆ. ದುಬೈನಿಂದ ಬಂದ ಆರು ಪ್ರಯಾಣಿಕರಲ್ಲಿ 24 ಕ್ಯಾರೆಟ್ ಪರಿಶುದ್ಧತೆಯ 2,870 ಗ್ರಾಂ ತೂಕದ ಚಿನ್ನ ದೊರೆತಿದೆ. ಇದರ ಮೌಲ್ಯ 1,46,87,410 ರೂ. ಎಂದು ಅಂದಾಜಿಸಲಾಗಿದೆ.