ಸುಳ್ಯ/ಮಂಗಳೂರು: ಪಂಜ ಅರಣ್ಯ ಇಲಾಖಾ ವ್ಯಾಪ್ತಿಯ ಐವತೊಕ್ಲು ಗ್ರಾಮದ ಪುಂಡಿಮನೆ ಎಂಬಲ್ಲಿ ನಡೆಯುತ್ತಿದ್ದ ಅಕ್ರಮ ಮರದ ದಿಮ್ಮಿ ಸಾಗಾಟ ಪ್ರಕರಣವನ್ನು ಅರಣ್ಯ ಇಲಾಖೆಯವರು ಪತ್ತೆ ಹಚ್ಚಿದ್ದಾರೆ. ಮರ ಮತ್ತು ಪಿಕಪ್ ವಾಹನವನ್ನು ವಶಕ್ಕೆ ಪಡೆದಿದ್ದಾರೆ.
ಪಂಜದಲ್ಲಿ ಅಕ್ರಮ ಮರ ಸಾಗಾಟ; ಆರೋಪಿ ಅಂದರ್ - Sulya Mangalore latest news
ಅಕ್ರಮ ಮರದ ದಿಮ್ಮಿ ಸಾಗಾಟ ಪ್ರಕರಣವನ್ನು ಅರಣ್ಯ ಇಲಾಖೆಯವರು ಪತ್ತೆ ಹಚ್ಚಿ, ಮರ ಮತ್ತು ಪಿಕಪ್ ವಾಹನವನ್ನು ವಶಕ್ಕೆ ಪಡೆದಿದ್ದಾರೆ. ವಶಪಡಿಸಿಕೊಂಡ ಮರದ ಮೌಲ್ಯ ಅಂದಾಜು ಒಂದು ಲಕ್ಷ ರೂಪಾಯಿ ಹಾಗೂ ವಾಹನದ ಮೌಲ್ಯ ಎರಡು ಲಕ್ಷ ರೂಪಾಯಿ ಎನ್ನಲಾಗಿದೆ.
ಪ್ರಕರಣ ಸಂಬಂಧ ಆರೋಪಿ ಮುಸ್ತಫಾ ಎಂಬಾತನನ್ನು ಬಂಧಿಸಲಾಗಿದ್ದು, ನಂತರದಲ್ಲಿ ಈತನನ್ನು ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಗಿದೆ ಎನ್ನಲಾಗಿದೆ. ಪಿಕಪ್ ವಾಹನದಲ್ಲಿ 9 ದಿಮ್ಮಿ ಹಾಗೂ ಸ್ಥಳದಲ್ಲಿ 29 ದಿಮ್ಮಿ ಸೇರಿ ಒಟ್ಟು 38 ಮರದ ದಿಮ್ಮಿಗಳನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಮರದ ಮೌಲ್ಯ ಅಂದಾಜು ಒಂದು ಲಕ್ಷ ರೂಪಾಯಿ ಹಾಗೂ ವಾಹನದ ಮೌಲ್ಯ ಎರಡು ಲಕ್ಷ ರೂಪಾಯಿ ಎನ್ನಲಾಗಿದೆ.
ಸುಬ್ರಹ್ಮಣ್ಯ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಆಸ್ಟೀನ್ ಸೋನ್ಸ್ ರವರ ಮಾರ್ಗದರ್ಶನದಲ್ಲಿ ಪಂಜ ವಲಯದ ಅರಣ್ಯಾಧಿಕಾರಿ ಮಂಜುನಾಥ್ ನೇತೃತ್ವದಲ್ಲಿ, ಉಪ ವಲಯ ಅರಣ್ಯಾಧಿಕಾರಿಗಳಾದ ಸಂತೋಷ್, ಅರಣ್ಯ ರಕ್ಷಕರಾದ ಗೀತಾ ರಾಜೇಶ್, ಅರಣ್ಯ ವೀಕ್ಷಕರಾದ ಮಹೇಶ್, ವಿಜಯಕುಮಾರ್, ಮೋಹನ್ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.