ಕರ್ನಾಟಕ

karnataka

ETV Bharat / state

ಅಕ್ರಮ ಮರಳು ಸಾಗಾಟ: ಎರಡು ಲಾರಿ ವಶಕ್ಕೆ - undefined

ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಎರಡು ಲಾರಿಗಳನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಅಕ್ರಮ ಮರಳು ಸಾಗಾಟ, ಎರಡು ಲಾರಿಗಳು ವಶಕ್ಕೆ

By

Published : Apr 5, 2019, 9:42 AM IST

ಮಂಗಳೂರು: ಯಾವುದೇ ಪರವಾನಗಿ ಇಲ್ಲದೆ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಎರಡು ಲಾರಿಗಳನ್ನು ಪತ್ತೆ ಹಚ್ಚಿದ ಪೊಲೀಸರು ಲಾರಿಗಳ ಸಹಿತ ಮರಳನ್ನು ವಶಪಡಿಸಿಕೊಂಡಿದ್ದಾರೆ.

ಅಡ್ಯಾರ್​ನಿಂದ ಪಡೀಲ್ ಮಾರ್ಗವಾಗಿ ಮರಳು ತುಂಬಿಸಿಕೊಂಡು ಬರುತ್ತಿದ್ದ ಲಾರಿಗಳನ್ನು ಪೊಲೀಸರು ತಪಾಸಣೆ ಮಾಡಿದ್ದಾರೆ. ಈ ವೇಳೆ ಯಾವುದೇ ಪರವಾನಗಿ ಇಲ್ಲದೆ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ. ತಕ್ಷಣ ಲಾರಿಗಳನ್ನು ವಶಪಡಿಸಿಕೊಂಡ ಪೊಲೀಸರು ಮುಂದಿನ ಸೂಕ್ತ ಕಾನೂನು ಕ್ರಮಕ್ಕಾಗಿ ಉಪ ನಿರ್ದೇಶಕರು ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಹಸ್ತಾಂತರಿಸಿದ್ದಾರೆ.

ಸ್ವಾಧೀನ ಪಡಿಸಿಕೊಂಡ ಮರಳು ಮತ್ತು ಲಾರಿಗಳ ಅಂದಾಜು ಮೌಲ್ಯ 31 ಲಕ್ಷ ರೂಪಾಯಿ ಎನ್ನಲಾಗಿದೆ. ಮಂಗಳೂರು ನಗರ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್, ಉಪ ಪೊಲೀಸ್ ಆಯುಕ್ತರಾದ ಹನುಮಂತರಾಯ ಮತ್ತು ಉಮಾ ಪ್ರಶಾಂತ್ ಹಾಗೂ ಮಂಗಳೂರು ದಕ್ಷಿಣ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ ರಾಮರಾವ್ ಮಾರ್ಗದರ್ಶನದಲ್ಲಿ ಕಂಕನಾಡಿ ನಗರ ಪೊಲೀಸ್ ಠಾಣಾ ನಿರೀಕ್ಷಕ ಜಗದೀಶ್ ಅವರ ನೇತೃತ್ವದದಲ್ಲಿ ಪಿಎಸ್ಐ ಹಾಗೂ ಠಾಣಾ ಸಿಬ್ಬಂದಿ ಪತ್ತೆ ಕಾರ್ಯ ನಡೆಸಿದ್ದಾರೆ.

For All Latest Updates

TAGGED:

ABOUT THE AUTHOR

...view details