ಕರ್ನಾಟಕ

karnataka

ETV Bharat / state

ಕರಾವಳಿ ಜಿಲ್ಲೆಗಳಿಗೆ ಪ್ರತ್ಯೇಕ ಮರಳು ನೀತಿ ಜಾರಿಗೆ ಮನವಿ

ದ.ಕ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ಅಪಾರ ಹಾನಿಯಾಗಿದ್ದು, ಸಂತ್ರಸ್ತ ಕುಟುಂಬಗಳಿಗೆ ಸರ್ಕಾರ ಪರಿಹಾರ ಧನ ಬಿಡುಗಡೆ ಮಾಡಬೇಕು ಎಂದು ಸಿಎಂಗೆ ಮನವಿ ಸಲ್ಲಿಸಿರುವುದಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ತಿಳಿಸಿದ್ದಾರೆ.

By

Published : Oct 15, 2020, 3:27 PM IST

ಸಿಎಂಗೆ ಮನವಿ
ಸಿಎಂಗೆ ಮನವಿ

ಬಂಟ್ವಾಳ: ಕರಾವಳಿಯ ಮೂರು ಜಿಲ್ಲೆಗಳಿಗೆ ಪ್ರತ್ಯೇಕ ಮರಳು ನೀತಿ ಜಾರಿಗೆ ತರಬೇಕು ಹಾಗೂ ಮರಳು ಗಣಿಗಾರಿಕೆ ನಿಯಮಗಳಿಗೆ ತಿದ್ದುಪಡಿ ತರಬೇಕು ಎಂದು ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದ್ದೇವೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ತಿಳಿಸಿದ್ದಾರೆ.

ಕರಾವಳಿಯಲ್ಲಿ ಸಾಂಪ್ರದಾಯಿಕ ರೀತಿಯಲ್ಲಿ ಮರಳು ತೆಗೆಯುತ್ತಿದ್ದು, ಇತರ ಜಿಲ್ಲೆಗಳ ನಿಯಮಗಳು ಇಲ್ಲಿಗೆ ಅನ್ವಯಿಸುವುದಿಲ್ಲ. ಅದಕ್ಕಾಗಿ ನದಿಯಲ್ಲಿ ಮರಳು ಗಣಿಗಾರಿಕೆ ನಿಷೇಧವನ್ನು ತೆಗೆಯಬೇಕು. ಇದು ಕೇವಲ ಕರಾವಳಿಗೆ ಜಿಲ್ಲೆಗಳಿಗೆ ಮಾತ್ರ ಅನ್ವಯವಾಗಬೇಕು. ಜೊತೆಗೆ ದ.ಕ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ಅಪಾರ ಹಾನಿಯಾಗಿದ್ದು, ಸಂತ್ರಸ್ತ ಕುಟುಂಬಗಳಿಗೆ ಸರ್ಕಾರ ಪರಿಹಾರ ಧನ ಬಿಡುಗಡೆ ಮಾಡಬೇಕು ಎಂದು ಸಿಎಂಗೆ ಮನವಿ ಮಾಡಿದ್ದೇವೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಮನವಿ ಸಲ್ಲಿಕೆ ವೇಳೆ ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್, ಹಿರಿಯ ಶಾಸಕರಾದ ಅಂಗಾರ, ಶಾಸಕರಾದ ವೇದವ್ಯಾಸ ಕಾಮತ್, ಉಮಾನಾಥ ಕೋಟ್ಯಾನ್, ಸಂಜೀವ ಮಠಂದೂರು, ಡಾ. ವೈ.ಭರತ್ ಶೆಟ್ಟಿ ಉಪಸ್ಥಿತರಿದ್ದರು ಎಂದು ಶಾಸಕ ರಾಜೇಶ್ ನಾಯ್ಕ್ ತಿಳಿಸಿದ್ದಾರೆ.

ABOUT THE AUTHOR

...view details