ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾದಿಂದ ಇಂದು ಐವರು ಸಾವನ್ನಪ್ಪಿದ್ದಾರೆ. ಜಿಲ್ಲೆಯಲ್ಲಿ ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ 617ಕ್ಕೆ ಏರಿಕೆಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಕೊರೊನಾಗೆ 5 ಮಂದಿ ಬಲಿ: 292 ಜನರಿಗೆ ಸೋಂಕು - ದಕ್ಷಿಣ ಕನ್ನಡ ಸುದ್ದಿ
ಜಿಲ್ಲೆಯಲ್ಲಿ ಇಂದು 292 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಈವರೆಗೆ 27,438 ಮಂದಿಗೆ ಕೊರೊನಾ ದೃಢಪಟ್ಟಿದೆ.

ಕೊರೊನಾದಿಂದ 5 ಸಾವು, 292 ಜನರಿಗೆ ಸೋಂಕು
ಜಿಲ್ಲೆಯಲ್ಲಿ ಇಂದು 292 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಈವರೆಗೆ 27,438 ಮಂದಿಗೆ ಕೊರೊನಾ ದೃಢಪಟ್ಟಿದೆ. ಜಿಲ್ಲೆಯಲ್ಲಿ ಇಂದು 499 ಮಂದಿ ಗುಣಮುಖರಾಗಿದ್ದು, ಈವರೆಗೆ 22,923 ಮಂದಿ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ 4,110 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ 2,09,218 ಮಂದಿಯ ತಪಾಸಣೆ ನಡೆಸಲಾಗಿದ್ದು, ಇದರಲ್ಲಿ 1,81,780 ನೆಗೆಟಿವ್ ಬಂದಿದೆ. ಜಿಲ್ಲೆಯಲ್ಲಿ ಈವರೆಗೆ 7,332 ಮಾಸ್ಕ್ ಉಲ್ಲಂಘನೆ ಪ್ರಕರಣ ದಾಖಲಾಗಿದ್ದು, ರೂ. 8,73,955 ದಂಡ ವಸೂಲಿ ಮಾಡಲಾಗಿದೆ.