ಮೂಡುಬಿದಿರೆ (ದಕ್ಷಿಣಕನ್ನಡ):ಕೋವಿಡ್ ಸಂಕಷ್ಟ ಕಾಲದಲ್ಲಿಯೂ ಮೈಕ್ರೋ ಫೈನಾನ್ಸ್ಗಳು ಸಾಲಗಾರರ ಮನೆಗೆ ಬಂದು ಬಡ್ಡಿ ಕಟ್ಟುವಂತೆ ಒತ್ತಡ ಹೇರಿ ಮಹಿಳೆಯರಿಗೆ ಮಾನಸಿಕ ಹಿಂಸೆ ನೀಡುತ್ತಿದ್ದಾರೆ. ಇದಕ್ಕೆ ಸರ್ಕಾರ ಕಡಿವಾಣ ಹಾಕಬೇಕೆಂದು ಹಿರಿಯ ಕಾರ್ಮಿಕ ಮುಖಂಡ ಬಿ.ಎಂ.ಭಟ್ ಒತ್ತಾಯಿಸಿದ್ದಾರೆ.
ತಹಶೀಲ್ದಾರ್ ಕಚೇರಿ ಮುಂಭಾಗ ಕರ್ನಾಟಕ ರಾಜ್ಯ ಋಣಮುಕ್ತ ಹೋರಾಟ ಸಮಿತಿ ಮೂಡುಬಿದಿರೆ ತಾಲೂಕು ಘಟಕದ ವತಿಯಿಂದ ಪ್ರತಿಭಟನಾ ಸಭೆ ನಡೆಸಲಾಯಿತು. ಈ ವೇಳೆ ಸಭೆಯಲ್ಲಿ ಮಾತನಾಡಿದ ಅವರು, ಮೈಕ್ರೋ ಫೈನಾನ್ಸ್ಗಳು ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ಗ್ರಾಹಕರ ಮೂರು ತಿಂಗಳ ಬಡ್ಡಿ ಮನ್ನಾ ಮಾಡಬೇಕಿತ್ತು. ಬದಲಾಗಿ ಗ್ರಾಹಕರ ಮನೆಗೆ ತೆರಳಿ ಬಡ್ಡಿ ಕಟ್ಟುವಂತೆ ಪೀಡಿಸುತ್ತಿವೆ ಎಂದರು.