ಮಂಗಳೂರು:ಕೊರೊನಾ ಸೋಂಕಿತರಿಗೆ ಮುಂಚೂಣಿಯಲ್ಲಿ ನಿಂತು ಸೇವೆ ನೀಡುತ್ತಿದ್ದ ಕಾಂಗ್ರೆಸ್ ಮುಖಂಡ ಸುಹೈಲ್ ಕಂದಕ್ ಅವರನ್ನು ಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರನ್ನು ದಾಖಲಿಸಿದ್ದ ಇಂಡಿಯಾನ ಆಸ್ಪತ್ರೆ ಇದೀಗ ದೂರು ವಾಪಸ್ ಪಡೆದಿದೆ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ.
ಮೃತ ಕೊರೊನಾ ಸೋಂಕಿತ ವ್ಯಕ್ತಿಯ ದುಬಾರಿ ಬಿಲ್ ವಿಚಾರದಲ್ಲಿ ಸುಹೈಲ್ ಕಂದಕ್ ನೇತೃತ್ವದಲ್ಲಿ ಆಸ್ಪತ್ರೆ ಆಡಳಿತ ಮಂಡಳಿಯನ್ನು ತರಾಟೆಗೆ ತೆಗೆದುಕೊಳ್ಳಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ಪತ್ರೆಯ ಮಹಿಳಾ ಸಿಬ್ಬಂದಿ ಕರ್ತವ್ಯಕ್ಕೆ ಅಡ್ಡಿ ಮತ್ತು ಹಲ್ಲೆ ಮಾಡಲಾಗಿದೆ ಎಂದು ದೂರು ನೀಡಿದ್ದರು. ಈ ದೂರಿನ ಆಧಾರದಲ್ಲಿ ಇಂದು ಮಧ್ಯಾಹ್ನ ಸುಹೈಲ್ ಕಂದಕ್ ಅವರನ್ನು ಮಂಗಳೂರು ಕಂಕನಾಡಿ ನಗರ ಠಾಣೆ ಪೊಲೀಸರು ಬಂಧಿಸಿದ್ದರು. ಸುಹೈಲ್ ಕಂದಕ್ ಬಂಧನದ ಬೆನ್ನಿಗೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು.