ಮಂಗಳೂರು: ಮಳಲಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ವಿಹೆಚ್ಪಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸುವಂತೆ ಸಲ್ಲಿಸಿದ ಅರ್ಜಿಯನ್ನು ಮಂಗಳೂರಿನ ಮೂರನೇ ಹೆಚ್ಚುವರಿ ನ್ಯಾಯಾಲಯ ಕೈಗೆತ್ತಿಕೊಂಡಿದೆ.
ಏಪ್ರಿಲ್ 21ರಂದು ಮಂಗಳೂರು ನಗರದ ಹೊರವಲಯದ ಗಂಜಿಮಠ ಬಳಿಯ ಮಳಲಿ ಮಸೀದಿಯ ನವೀಕರಣದ ಕಾಮಗಾರಿ ವೇಳೆ ದೇಗುಲ ಶೈಲಿ ಪತ್ತೆಯಾಗಿತ್ತು. ಈ ಬಗ್ಗೆ ವಿಶ್ವ ಹಿಂದೂ ಪರಿಷತ್ ನ್ಯಾಯಾಲಯದ ಮೆಟ್ಟಿಲೇರಿತ್ತು. ನ್ಯಾಯಲಯವು ಕಾಮಗಾರಿಗೆ ತಡೆಯಾಜ್ಞೆ ನೀಡಿ ಮುಂದಿನ ವಿಚಾರಣೆಯನ್ನು ಜೂನ್ 3ಕ್ಕೆ ನಿಗದಿಪಡಿಸಿತ್ತು.