ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಮುಳಿಕ್ಕಾರು ಎಂಬಲ್ಲಿ ನೆರಿಯ ಹೊಳೆಗೆ ಸಣ್ಣ ನೀರಾವರಿ ಇಲಾಖೆಯ ಅನುದಾನದಿಂದ ಸುಮಾರು 15 ಕೋ.ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಕಿಂಡಿ ಅಣೆಕಟ್ಟು ಕಾಮಗಾರಿಯನ್ನು ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಅಣೆಕಟ್ಟು ಕಾಮಗಾರಿ ವೀಕ್ಷಿಸಿದ ಡಾ. ಡಿ. ವೀರೇಂದ್ರ ಹೆಗ್ಗಡೆ - ಅಣೆಕಟ್ಟು ಕಾಮಗಾರಿಯನ್ನು ಪರಿಶೀಲಿಸಿದ ಡಾ. ಡಿ. ವೀರೇಂದ್ರ ಹೆಗ್ಗಡೆ ಶಾಸಕ ಹರೀಶ್ ಪೂಂಜ
ಸುಮಾರು 15 ಕೋ.ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಕಿಂಡಿ ಅಣೆಕಟ್ಟು ಕಾಮಗಾರಿಯನ್ನು ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಹಾಗೂ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ, ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳಕ್ಕೆ ಕುಡಿಯುವ ನೀರು ಪೂರೈಕೆಗಾಗಿ ಧರ್ಮಸ್ಥಳ ಗ್ರಾಮದ ಮುಳಿಕ್ಕಾರು ಎಂಬಲ್ಲಿ ನೆರಿಯಾ ನದಿಗೆ 15 ಕೋಟಿ ರೂ. ವೆಚ್ಚದಲ್ಲಿ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ಮಂಜೂರಾತಿ ದೊರಕಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. ಇದರಿಂದಾಗಿ ಮುಂದೆ ನೀರಿನ ಸಮಸ್ಯೆ ಉಂಟಾಗುವುದಿಲ್ಲ. ಸರಕಾರ 15 ಕೋಟಿ ರೂ. ಮಂಜೂರಾತಿ ನೀಡಿ ಕಳೆದ ವರ್ಷ ಕಾಮಗಾರಿ ಪ್ರಾರಂಭಿಸಿದೆ. ಆದರೆ, ಕೊರೊನಾದಿಂದಾಗಿ ಎಲ್ಲ ಕೆಲಸಗಳು ಸ್ಥಗಿತವಾಗಿ ಇದೀಗ ಗುತ್ತಿಗೆದಾರರು ಕಾಮಗಾರಿಯನ್ನು ಕೈಗೆತ್ತಿಕೊಂಡು ಸುಮಾರು ಒಂದೂವರೆ ತಿಂಗಳಲ್ಲಿ ನಿರೀಕ್ಷೆಗೂ ಮೀರಿ ಶೀಘ್ರವಾಗಿ ಕೆಲಸ ಮಾಡಿದ್ದಾರೆ ಎಂದರು.