ಪ್ರತಿಭಟನೆಯಲ್ಲಿ ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು ಮಾತನಾಡಿದರು ಪುತ್ತೂರು (ದಕ್ಷಿಣ ಕನ್ನಡ):ಬಿಜೆಪಿ ನಾಯಕರಾದ, ರಾಜ್ಯ ಬಿಜೆಪಿ ಅಧ್ಯಕ್ಷ ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ಕೇಂದ್ರದ ಮಾಜಿ ಸಚಿವ ಬೆಂಗಳೂರು ಉತ್ತರದ ಹಾಲಿ ಸಂಸದ ಡಿ.ವಿ ಸದಾನಂದ ಗೌಡ ಅವರ ಬಗ್ಗೆ ಮೇ 15 ರಂದು ಪುತ್ತೂರು ಬಸ್ ನಿಲ್ದಾಣದ ಬಳಿ ಆಕ್ಷೇಪಾರ್ಹ ಬ್ಯಾನರ್ ಅಳವಡಿಸಿರುವುದನ್ನು ವಿರೋಧಿಸಿ ಪುತ್ತೂರು ಬಿಜೆಪಿಯಿಂದ ನಗರ ಪೊಲೀಸ್ ಠಾಣೆಗೆ ದೂರು ನೀಡಿದರು.
ಕಾಂಗ್ರೆಸ್ ಆಡಳಿತದಲ್ಲಿ ಹಿಂದೂಗಳ ಮೇಲೆ ದೌರ್ಜನ್ಯ ನಿರಂತರ:ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು ಮಾತನಾಡಿ, ಕಾಂಗ್ರೆಸ್ ಆಡಳಿತಕ್ಕೆ ಬಂದ ಮೇಲೆ ಹಿಂದೂಗಳ ಮೇಲೆ ದೌರ್ಜನ್ಯ ಹಾಗೂ ಅಶಾಂತಿಯ ವಾತಾವರಣಕ್ಕೆ ಎಡೆ ನೀಡುವ ಕಾರ್ಯ ನಿರಂತರವಾಗಿ ನಡೆಯಲಿದೆ. ಆದ್ದರಿಂದ ಬಿಜೆಪಿ ಕಾರ್ಯಕರ್ತರು ಹೋರಾಟಕ್ಕೆ ಸದಾ ಸಿದ್ಧರಾಗಿ ಎಂದು ನಿಕಟಪೂರ್ವ ಶಾಸಕ ಸಂಜೀವ ಮಠಂದೂರು ಕರೆ ನೀಡಿದರು. ಮಾಜಿ ಸಿಎಂ ಸದಾನಂದ ಗೌಡ ಅವರು ಪುತ್ತೂರಿನ ಅಶಾಂತಿಯ ವಾತಾವರಣಕ್ಕೆ ಇತಿಶ್ರೀ ಹಾಕಿದವರು. ಸಂಸದ ನಳಿನ್ ಕುಮಾರ್ ಕಟೀಲ್ ಅವರು ಅಶಾಂತಿಯ ವಾತಾವರಣಕ್ಕೆ ಕಡಿವಾಣ ಹಾಕಿದವರು ಎಂದು ಹೇಳಿದರು.
ಪ್ರತಿಭಟನೆಯಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ನಗರಸಭಾ ಮಾಜಿ ಅಧ್ಯಕ್ಷ ಜೀವಂಧರ್ ಜೈನ್, ನಗರಸಭೆ ಮಾಜಿ ಸ್ಥಾಹಿ ಸಮಿತಿ ಅಧ್ಯಕ್ಷ ಬಾಲಚಂದ್ರ ಕರಿಯಾಲ, ಪುಡಾ ಅಧ್ಯಕ್ಷ ಭಾಮಿ ಅಶೋಕ್ ಶೆಣೈ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ, ಪ್ರಮುಖರಾದ ಆಶಾ ತಿಮ್ಮಪ್ಪ, ಸಾಜಾ ರಾಧಾಕೃಷ್ಣ ಆಳ್ವ, ಪಿ.ಜಿ. ಜಗನ್ನಿವಾಸ್ ರಾವ್, ಚಂದ್ರಶೇಖರ್ ರಾವ್ ಬಪ್ಪಳಿಗೆ, ರಾಜೇಶ್ ಬನ್ನೂರು, ವಿದ್ಯಾ ಆರ್, ಗೌರಿ, ಲೊಕೇಶ್ ಹೆಗ್ಡೆ, ಉಷಾ ಮುಳಿಯ ಉಪಸ್ಥಿತರಿದ್ದರು.
ಅಕ್ಷೇಪಾರ್ಹ ಘೋಷಣೆ, ಸ್ವಯಂ ಪ್ರೇರಿತ ಪ್ರಕರಣ ದಾಖಲು: ಬೆಳಗಾವಿ ಉತ್ತರ ವಿಧಾನಸಭೆ ಕ್ಷೇತ್ರದ ವಿಜೇತ ಕಾಂಗ್ರೆಸ್ ಅಭ್ಯರ್ಥಿ ರಾಜು ಸೇಠ್ ಅವರ ಗೆಲುವಿನ ಸಂಭ್ರಮಾಚರಣೆಯಲ್ಲಿ 'ಪಾಕಿಸ್ತಾನ್ ಜಿಂದಾಬಾದ್' ಎಂದು ಘೋಷಣೆ ಕೂಗಿದ ಕಿಡಿಗೇಡಿಗಳ ವಿರುದ್ಧ ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿದೆ. ನಗರದ ಆರ್‌ಪಿಡಿ ಕ್ರಾಸ್ನಲ್ಲಿ ಬ್ಯಾರಿಕೇಡ್ ಹಾಕಿ ಜನರನ್ನು ತಡೆದಿದ್ದ ಸಂದರ್ಭದಲ್ಲಿ ಉತ್ತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಸಂಭ್ರಮಾಚರಣೆ ನಡೆಯುತ್ತಿತ್ತು. ಯುವಕನೊಬ್ಬ ಜಿಂದಾಬಾದ್ ಜಿಂದಾಬಾದ್ ಎಂದು ಕೂಗಿದಾಗ ಇನ್ನುಳಿದ ಯುವಕರು ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
ಇದನ್ನೂ ಓದಿ:ಹಿಂಸಾ ಗ್ಯಾರಂಟಿ ಸ್ಕೀಮ್ ಸಹಿಸುವುದಿಲ್ಲ: ನಳಿನ್ ಕುಮಾರ್ ಕಟೀಲ್ ಎಚ್ಚರಿಕೆ