ಕರ್ನಾಟಕ

karnataka

ETV Bharat / state

ಕಟೀಲ್, ಡಿವಿಎಸ್ ಭಾವಚಿತ್ರಕ್ಕೆ ಅವಮಾನ: ಆರೋಪಿಗಳ ಮೇಲೆ ಪೊಲೀಸ್ ದೌರ್ಜನ್ಯದ ಸತ್ಯಾಸತ್ಯತೆ ಪರಿಶೀಲನೆ- ಎಸ್​ಪಿ - ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್ ಕಟೀಲ್

ಬಿಜೆಪಿ ರಾಜ್ಯಾಧ್ಯಕ್ಷ ಭಾವಚಿತ್ರಕ್ಕೆ ಅವಮಾನ ಎಸಗಿದ ಪ್ರಕರಣದಲ್ಲಿ ಬಂಧಿಸಿದ ಆರೋಪಿಗಳ ಮೇಲೆ ಪೊಲೀಸರು ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪದ ಸತ್ಯಾಸತ್ಯತೆ ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ಎಸ್​ಪಿ ಭರವಸೆ ನೀಡಿದ್ದಾರೆ.

Insult case register for BJP  BJP state president portrait in Mangaluru  Mangaluru news  ಆರೋಗ್ಯ ವಿಚಾರಿಸಿದ ಬೆಳ್ತಂಗಡಿ ಶಾಸಕ  ಬಿಜೆಪಿ ರಾಜ್ಯಾಧ್ಯಕ್ಷ ಭಾವಚಿತ್ರಕ್ಕೆ ಅವಮಾನ ಪ್ರಕರಣ  ಪೊಲೀಸ್ ದೌರ್ಜನ್ಯದ ಸತ್ಯಾಸತ್ಯತೆಯ ಪರಿಶೀಲನೆ  ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ  ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್ ಕಟೀಲ್  ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡ
ಬಿಜೆಪಿ ರಾಜ್ಯಾಧ್ಯಕ್ಷ ಭಾವಚಿತ್ರಕ್ಕೆ ಅವಮಾನ ಪ್ರಕರಣ

By

Published : May 18, 2023, 10:57 AM IST

ಮಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್ ಕಟೀಲ್ ಮತ್ತು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರ ಭಾವಚಿತ್ರಕ್ಕೆ ಅವಮಾನಿಸಿದ ಪ್ರಕರಣದಲ್ಲಿ ಬಂಧಿತರಾದ 9 ಜನರ ಮೇಲೆ ಪೊಲೀಸರು ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ಮಾಹಿತಿಯ ಸತ್ಯಾಸತ್ಯತೆ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಎಸ್‌ಪಿ ವಿಕ್ರಂ‌ ಅಮಟೆ ತಿಳಿಸಿದ್ದಾರೆ.

ಚುನಾವಣಾ ಫಲಿತಾಂಶ ಬಳಿಕ ಸೋಮವಾರ ಬೆಳಗ್ಗೆ ಪುತ್ತೂರು ಬಸ್ ನಿಲ್ದಾಣ ಸಮೀಪದ ಅರಣ್ಯ ಇಲಾಖೆಯ ಆವರಣ ಗೋಡೆ ಬಳಿ ಈ ಫ್ಲೆಕ್ಸ್‌ ಕಾಣಿಸಿಕೊಂಡಿತ್ತು. ಪುತ್ತೂರಿನಲ್ಲಿ ಬಿಜೆಪಿಯ ಸೋಲಿಗೆ ಕಾರಣಕರ್ತರಾದ ನಿಮಗೆ ಶ್ರದ್ಧಾಂಜಲಿ ಎಂಬ ಒಕ್ಕಣೆ ಬರೆದು ನಳಿನ್ ಕುಮಾರ್ ಕಟೀಲ್ ಮತ್ತು ಸದಾನಂದ ಗೌಡರ ಚಿತ್ರಗಳನ್ನು ಅವಮಾನಿಸಲಾಗಿತ್ತು. ಇದರ ಬೆನ್ನಲ್ಲೇ ಮಾಜಿ ಶಾಸಕ ಸಂಜೀವ ಮಠಂದೂರು ನೇತೃತ್ವದಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿತ್ತು.

ಪುತ್ತೂರು ನಗರಸಭೆ ಪೌರಾಯುಕ್ತ ಮಧು ಎಸ್.ಮನೋಹ‌ರ್ ಅವರು ವಿವಾದಾಸ್ಪದ ಬ್ಯಾನರ್ ತೆರವು ಮಾಡಿ ಪೊಲೀಸ್ ದೂರು ನೀಡಿದ್ದರು. ಬಿಜೆಪಿ ನಿಯೋಗ ಕೂಡ ಪೊಲೀಸ್ ದೂರು ನೀಡಿತ್ತು. ಇದಾದ ಬಳಿಕ ಪೊಲೀಸರು ನರಿಮೊಗರು ಗ್ರಾಮದ ನಿವಾಸಿಗಳಾದ ವಿಶ್ವನಾಥ್, ಮಾಧವ, ಅಭಿ ಯಾನೆ ಅವಿನಾಶ್, ಶಿವರಾಮ್, ಚೈತ್ರೀಶ್, ಈಶ್ವರ, ನಿಶಾಂತ್, ದೀಕ್ಷಿತ್, ಗುರುಪ್ರಸಾದ್ ಎಂಬವರನ್ನು ಬಂಧಿಸಿ ವಿಚಾರಣೆ ನಡೆಸಿದ್ದರು.

ಬಂಧನದ ಸುದ್ದಿ ತಿಳಿಯುತ್ತಲೇ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಅವರು ಡಿವೈಎಸ್​ಪಿ ಕಚೇರಿಗೆ ಸೋಮವಾರ ರಾತ್ರಿ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದರಲ್ಲದೆ, ಅಧಿಕಾರಿಗಳ ಜತೆ ಮಾತುಕತೆ ನಡೆಸಿದ್ದರು. ಇದಾದ ಬಳಿಕ ವಶದಲ್ಲಿದ್ದ ಆರೋಪಿಗಳನ್ನು ಬಿಡುಗಡೆ ಮಾಡಲಾಗಿತ್ತು.

ಆರೋಪಿಗಳನ್ನು ಬಿಡುಗಡೆ ಮಾಡಿದ ಬಳಿಕ ಪೊಲೀಸರು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ಫೋಟೋ ವೈರಲ್ ಮಾಡಲಾಗಿತ್ತು. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರವಾಗುತ್ತಿರುವ ಬಗ್ಗೆ ತಿಳಿದುಕೊಳ್ಳಲು ವಿಚಾರಣೆ ಕೈಗೊಳ್ಳಲಾಗುವುದು ಎಂದು ಎಸ್​ಪಿ ಹೇಳಿದ್ದಾರೆ.

ಇದೀಗ ಬಿಡುಗಡೆಗೊಂಡ ಯುವಕರ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಇದರಲ್ಲಿ ಯುವಕರ ಮೈಮೇಲೆ ಗಾಯದ ಗುರುತುಗಳು, ಥಳಿಸಿದ ಗುರುತುಗಳು ಕಾಣಿಸಿಕೊಂಡಿದೆ. ಈ ಘಟನೆ ಬಗ್ಗೆ ಟ್ವೀಟ್ ಮೂಲಕ ಪ್ರತಿಕ್ರಿಯಿಸಿರುವ ನಳಿನ್ ಕುಮಾರ್ ಕಟೀಲ್, ಯುವಕರ ಮೇಲೆ ಪುತ್ತೂರಿನಲ್ಲಿ ದಾಖಲಾದ ಪ್ರಕರಣದಲ್ಲಿ ಪೊಲೀಸರ ವರ್ತನೆ ಇಲಾಖೆಗೆ ಕಪ್ಪುಚುಕ್ಕೆ. ದೂರಿನ ಬಗ್ಗೆ ಪರಿಶೀಲಿಸಿ ಯಥೋಚಿತ ತನಿಖೆ ನಡೆಸುವ ಬದಲು ಚಿತ್ರಹಿಂಸೆ ನೀಡಿರುವುದನ್ನು ಖಂಡಿಸುತ್ತೇನೆ. ಉನ್ನತ ಪೊಲೀಸ್ ಅಧಿಕಾರಿಗಳು ತಪ್ಪಿತಸ್ಥ ಅಧಿಕಾರಿಗಳ ಬಗ್ಗೆ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಆರೋಗ್ಯ ವಿಚಾರಿಸಿದ ಬೆಳ್ತಂಗಡಿ ಶಾಸಕ: ಪುತ್ತೂರು ಘಟನೆ ವಿಷಯ ತಿಳಿದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ತಡ ರಾತ್ರಿ ಆಸ್ಪತ್ರೆಗೆ ಭೇಟಿ ನೀಡಿ ಹಲ್ಲೆಗೊಳಗಾದ ಕಾರ್ಯಕರ್ತರ ಆರೋಗ್ಯ ವಿಚಾರಣೆ ಮಾಡಿದರು. ಈ ಸಂದರ್ಭದಲ್ಲಿ ಅರುಣ್ ಕುಮಾರ್ ಪುತ್ತಿಲ, ಮುರಳಿ ಕೃಷ್ಣ ಹಸಂತಡ್ಕ ಉಪಸ್ಥಿತರಿದ್ದರು.

ಇದನ್ನೂ ಓದಿ:ಚಾರ್ಮಾಡಿ ಘಾಟಿಯಲ್ಲಿ ಹಗಲಲ್ಲೇ ಮತ್ತೆ ಒಂಟಿ ಸಲಗ ಪ್ರತ್ಯಕ್ಷ: ಸಾಲುಗಟ್ಟಿ ನಿಂತ ವಾಹನಗಳು

ABOUT THE AUTHOR

...view details