ಕರ್ನಾಟಕ

karnataka

ETV Bharat / state

ಪೊಲೀಸರು ಪ್ರಮಾದ ಎಸಗಿದ್ದರೆ ತನಿಖೆ ನಡೆಸುತ್ತೇವೆ : ಪೊಲೀಸ್ ಕಮಿಷನರ್ ಎನ್‌ ಶಶಿಕುಮಾರ್‌ - ಗರದ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಲಾಪು

ಆಸ್ಪತ್ರೆಯಲ್ಲಿ ದಾಖಲಾಗಿರುವ ಒಂದು ತಂಡದ ಗಾಯಾಳುಗಳು ಸಾಮಾಜಿಕ ಜಾಲತಾಣಗಳಲ್ಲಿ ಪೊಲೀಸರ ವಿರುದ್ಧ ಹೇಳಿಕೆ ನೀಡಿರುವುದು ಸತ್ಯಕ್ಕೆ ದೂರವಾಗಿದೆ. ಪೊಲೀಸರ ಕಡೆಯಿಂದ ಏನಾದರೂ ಪ್ರಮಾದ ಸಂಭವಿಸಿದ್ದರೆ ತನಿಖೆ ನಡೆಸಲಾಗುವುದು. ಈ ಬಗ್ಗೆ ದಕ್ಷಿಣ ಉಪವಿಭಾಗದ ಎಸಿಪಿಗೆ ತನಿಖೆ ನಡೆಸಲು ಸೂಚಿಸಲಾಗಿದೆ..

Investigate if the police are involved in a blunder:  mangalore Commissioner
ಪೊಲೀಸರು ಪ್ರಮಾದ ಎಸಗಿದ್ದರೆ ತನಿಖೆ ನಡೆಸಲಾಗುತ್ತದೆ

By

Published : Mar 15, 2021, 10:09 PM IST

ಮಂಗಳೂರು: ನಗರದ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಲಾಪು ಸಮೀಪ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ‌.

ದೂರು-ಪ್ರತಿದೂರು ದಾಖಲಿಸಲಾಗಿದ್ದು, ಕೆಲವರನ್ನು ಬಂಧಿಸಿ, ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಗಿದೆ.

ಈ ಬಗ್ಗೆ ಐಪಿಸಿ ಸೆಕ್ಷನ್ 279 ಹಾಗೂ 323ರ ಅಡಿ ಪ್ರಕರಣ ದಾಖಲಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಹೇಳಿದ್ದಾರೆ. ಬಂಧನಕ್ಕೊಳಗಾದವರಲ್ಲಿ ಒಂದು ತಂಡದವರು ಜಾಗೃತಿ ಅಭಿಯಾನದಲ್ಲಿ ಭಾಗಿಯಾಗಿದ್ದಾರೆಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ. ಈ ಸಂದರ್ಭ ಮತ್ತೊಂದು ತಂಡದ ನಡುವೆ ಮಾರಾಮಾರಿ ನಡೆದಿದೆ‌.

ಆಸ್ಪತ್ರೆಯಲ್ಲಿ ದಾಖಲಾಗಿರುವ ಒಂದು ತಂಡದ ಗಾಯಾಳುಗಳು ಸಾಮಾಜಿಕ ಜಾಲತಾಣಗಳಲ್ಲಿ ಪೊಲೀಸರ ವಿರುದ್ಧ ಹೇಳಿಕೆ ನೀಡಿರುವುದು ಸತ್ಯಕ್ಕೆ ದೂರವಾಗಿದೆ. ಪೊಲೀಸರ ಕಡೆಯಿಂದ ಏನಾದರೂ ಪ್ರಮಾದ ಸಂಭವಿಸಿದ್ದರೆ ತನಿಖೆ ನಡೆಸಲಾಗುವುದು. ಈ ಬಗ್ಗೆ ದಕ್ಷಿಣ ಉಪವಿಭಾಗದ ಎಸಿಪಿಗೆ ತನಿಖೆ ನಡೆಸಲು ಸೂಚಿಸಲಾಗಿದೆ ಎಂದು ಮಾಹಿತಿ ನೀಡಿದರು.

ಈ ಸಂದರ್ಭ ಒಂದು ತಂಡವು ಮತ್ತೊಂದು ತಂಡವನ್ನು ಗಾಂಜಾ ಸೇವನೆ ಮಾಡಿದ್ದರೆಂದು ಆರೋಪಿಸಿದ್ದರು. ಈ ಹಿನ್ನೆಲೆ ಎರಡೂ ತಂಡದವರನ್ನು ರಕ್ತ ಪರೀಕ್ಷೆಗೊಳಪಡಿಸಲಾಯಿತು‌. ಆದರೆ, ಯಾರೂ ಗಾಂಜಾ ಸೇವನೆ ಮಾಡಿರುವ ಬಗ್ಗೆ ವರದಿ ಬಂದಿಲ್ಲ. ಒಂದು ತಂಡದವರು ಮದ್ಯ ಸೇವನೆ ಮಾಡಿದ್ದಾರೆಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ.

ABOUT THE AUTHOR

...view details