ಧರ್ಮಸ್ಥಳ : ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ 35 ನೇ ರಾಜ್ಯ ಸಮ್ಮೇಳನಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿ ಆಹ್ವಾನ ನೀಡಲಾಯಿತು.
ಪತ್ರಕರ್ತರ ರಾಜ್ಯ ಸಮ್ಮೇಳನಕ್ಕೆ ಡಾ. ವೀರೇಂದ್ರ ಹೆಗ್ಗಡೆಯವರಿಗೆ ಆಹ್ವಾನ - 35th State Conference of Journalists
ಮಾರ್ಚ್ 7 ಮತ್ತು 8 ರಂದು ಮಂಗಳೂರಿನ ಕುದ್ಮುಲ್ ರಂಗರಾವ್ ಸಭಾಂಗಣದಲ್ಲಿ ಪತ್ರಕರ್ತರ ರಾಜ್ಯ ಸಮ್ಮೇಳನ ನಡೆಯಲಿದ್ದು, ಸಮ್ಮೆಳನದಲ್ಲಿ ರಾಜ್ಯದ ಸುಮಾರು 3 ಸಾವಿರ ಮಂದಿ ಪತ್ರಕರ್ತರು ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಧರ್ಮಸ್ಥಳದ ಬೀಡಿನಲ್ಲಿ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಗೆ ನೀಡಿ ಕಾರ್ಯಕ್ರಮಕ್ಕೆ ಆಮಂತ್ರಿಸಲಾಯಿತು
ಮಾರ್ಚ್ 7 ಮತ್ತು 8 ರಂದು ಮಂಗಳೂರಿನ ಕುದ್ಮುಲ್ ರಂಗರಾವ್ ಸಭಾಂಗಣದಲ್ಲಿ ಪತ್ರಕರ್ತರ ರಾಜ್ಯ ಸಮ್ಮೇಳನ ನಡೆಯಲಿದ್ದು, ಸಮ್ಮೆಳನದಲ್ಲಿ ರಾಜ್ಯದ ಸುಮಾರು 3 ಸಾವಿರ ಮಂದಿ ಪತ್ರಕರ್ತರು ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಧರ್ಮಸ್ಥಳದ ಬೀಡಿನಲ್ಲಿ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಗೆ ನೀಡಿ ಕಾರ್ಯಕ್ರಮಕ್ಕೆ ಆಮಂತ್ರಿಸಲಾಯಿತು.
ರಾಜ್ಯ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಜಿಲ್ಲಾಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಮಂಗಳೂರು ಪ್ರೆಸ್‌ಕ್ಲಬ್ ಅಧ್ಯಕ್ಷ ಅನ್ನು ಮಂಗಳೂರು ಆಮಂತ್ರಣ ಪತ್ರಿಕೆಯನ್ನು ಹೆಗ್ಗಡೆಯವರಿಗೆ ನೀಡಿದರು. ಬಳಿಕ ಧಮಸ್ಥಳದ ಡಿ.ಹರ್ಷೇಂದ್ರ ಕುಮಾರ್ ಮತ್ತು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರನ್ನೂ ಭೇಟಿ ಮಾಡಿ ಸಮ್ಮೇಳನಕ್ಕೆ ಆಮಂತ್ರಿಸಲಾಯಿತು. ಈ ಸಂದರ್ಭ ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಅಶ್ರಫ್ ಆಲಿಕುಂಞಿ, ಜಿಲ್ಲಾ ಪದಾಧಿಕಾರಿಗಳಾದ ಆನಂದ ಶೆಟ್ಟಿ, ಭಾಸ್ಕರ ರೈ ಕಟ್ಟ, ಜಗನ್ನಾಥ ಶೆಟ್ಟಿ ಬಾಳ, ಹಾಸನ ಪತ್ರಕರ್ತರ ಸಂಘದ ಮಾಜಿ ಜಿಲ್ಲಾಧ್ಯಕ್ಷ ರವಿ ನಾಕಲ್ಗೋಡು, ತಾಲೂಕು ಪತ್ರಕರ್ತರ ಸಂಘದ ಕಾರ್ಯದರ್ಶಿ ಮನೋಹರ ಬಳಂಜ, ಶ್ರೀನಿವಾಸ ತಂತ್ರಿ, ಆರ್.ಎನ್ ಪೂವಣಿ, ಧನಕೀರ್ತಿ ಆರಿಗ, ಸತೀಶ್ ಪೇರ್ಲೆ ಉಪಸ್ಥಿತರಿದ್ದರು.
TAGGED:
ಪತ್ರಕರ್ತರ 35ನೇ ರಾಜ್ಯ ಸಮ್ಮೇಳನ