ಕರ್ನಾಟಕ

karnataka

ETV Bharat / state

ಮಂಗಳೂರು: RT-PCR ರಿಪೋರ್ಟ್‌ ಕಡ್ಡಾಯ ವಿರೋಧಿಸಿ ಹೆದ್ದಾರಿ ತಡೆದು ಪ್ರತಿಭಟನೆ

ಕೋವಿಡ್‌ ಸಂಬಂಧ RT-PCR ಪರೀಕ್ಷೆ ವರದಿ ಕಡ್ಡಾಯ ಮಾಡಿರುವುದನ್ನು ವಿರೋಧಿಸಿ ಕರ್ನಾಟಕದಿಂದ ಕೇರಳಕ್ಕೆ ಹೋಗುವ ವಾಹನಗಳನ್ನು ಸುಮಾರು ಅರ್ಧ ಗಂಟೆಗಳ ಕಾಲ ತಡೆದು ಐಯುಎಂಎಲ್ ಮತ್ತು ಎಸ್‌ಡಿಪಿಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

IUML and SDPI party Activists protest
ಐಯುಎಂಎಲ್ ಮತ್ತು ಎಸ್ ಡಿ ಪಿ ಐ ಕಾರ್ಯಕರ್ತರ ಪ್ರತಿಭಟನೆ

By

Published : Aug 2, 2021, 1:17 PM IST

ಮಂಗಳೂರು: ಕೇರಳದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಪ್ರವೇಶಿಸುವವರಿಗೆ ಆರ್​ಟಿ-ಪಿಸಿಆರ್​ ಟೆಸ್ಟ್​ ಕಡ್ಡಾಯಗೊಳಿಸಿ ಪ್ರವೇಶಕ್ಕೆ ನಿರ್ಬಂಧ ವಿಧಿಸಿರುವ ಕರ್ನಾಟಕದ ನಿರ್ಧಾರಕ್ಕೆ ಐಯುಎಂಎಲ್ ಮತ್ತು ಎಸ್​ಡಿಪಿಐ ಪಕ್ಷದ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿ ತಲಪಾಡಿಯ ಕೇರಳದ ಗಡಿಯಲ್ಲಿ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.

ಕೇರಳದ ಗಡಿ ಪ್ರದೇಶದಲ್ಲಿ ಕರ್ನಾಟಕದಿಂದ ಕೇರಳಕ್ಕೆ ಹೋಗುವ ವಾಹನಗಳನ್ನು ಸುಮಾರು ಅರ್ಧ ಗಂಟೆಗಳ ಕಾಲ ತಡೆದು ಪ್ರತಿಭಟನೆ ನಡೆಸಿದ ಐಯುಎಂಎಲ್ ಮತ್ತು ಎಸ್‌ಡಿಪಿಐ ಕಾರ್ಯಕರ್ತರು, ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಐಯುಎಂಎಲ್ ಮತ್ತು ಎಸ್ ಡಿ ಪಿ ಐ ಕಾರ್ಯಕರ್ತರ ಪ್ರತಿಭಟನೆ

ಕೇರಳದಿಂದ ಕರ್ನಾಟಕಕ್ಕೆ ಬರುವವರಿಗೆ ಮೊದಲು ಆರ್​ಟಿ-ಪಿಸಿಆರ್ ನೆಗೆಟಿವ್ ರಿಪೋರ್ಟ್​, ಕೊರೊನಾ ಲಸಿಕೆ ಸರ್ಟಿಫಿಕೇಟ್ ಅಥವಾ ಸ್ಥಳದಲ್ಲಿಯೇ ಆರ್​ಟಿ-ಪಿಸಿಆರ್ ಪರೀಕ್ಷೆ ನಡೆಸಿ, ಜಿಲ್ಲೆ ಪ್ರವೇಶಿಸಲು ಅವಕಾಶ ನೀಡಲಾಗಿತ್ತು. ಆದರೆ ಇದೀಗ ಪರೀಕ್ಷೆ ರದ್ದುಗೊಳಿಸಲಾಗಿದ್ದು, ಕೇವಲ ಕೇರಳದಿಂದ ಆರ್​ಟಿ-ಪಿಸಿಆರ್ ನೆಗೆಟಿವ್ ವರದಿ​ ತರುವಂತೆ ತಿಳಿಸಲಾಗಿದೆ. ನೆಗೆಟಿವ್ ರಿಪೋರ್ಟ್​ ತಂದವರಿಗೆ ಮಾತ್ರ ಜಿಲ್ಲೆಗೆ ಪ್ರವೇಶ ನೀಡಲಾಗುತ್ತಿದೆ. ಕೂಡಲೇ ಈ ನಿರ್ಧಾರವನ್ನು ವಾಪಸ್​ ಪಡೆಯಬೇಕೆಂದು ಒತ್ತಾಯಿಸಿದರು.

ಬಳಿಕ ಸ್ಥಳಕ್ಕೆ ಬಂದ ಕೇರಳದ ಮಂಜೇಶ್ವರ ಪೊಲೀಸರು ಪ್ರತಿಭಟನಾಕಾರರ ಮನವೊಲಿಸಿ ಪ್ರತಿಭಟನೆ ವಾಪಸ್​ ತೆಗೆದುಕೊಳ್ಳುವಂತೆ ಮಾಡಿದ್ದಾರೆ.

ABOUT THE AUTHOR

...view details