ಕರ್ನಾಟಕ

karnataka

ETV Bharat / state

ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ - ದಕ್ಷಿಣ ಕನ್ನಡ ಜಿಲ್ಲಾ ಸುದ್ದಿ

ಈಗಾಗಲೇ ಕೈಬಿಟ್ಟಿರುವ ಲಾಕ್​​ಡೌನ್​​ಅನ್ನು ಭಾನುವಾರ ಮಾತ್ರ ಮಾಡುತ್ತಿರುವುದು ಎಷ್ಟರ ಮಟ್ಟಿಗೆ ಸರಿ? ಅದರಿಂದ ಜನರಿಗೆ ಒಳ್ಳೆಯದಾಗುವುದಿದ್ದರೆ ನಮ್ಮ ಬೆಂಬಲ ಇದೆ ಎಂದು ಐವನ್ ಡಿಸೋಜ ಹೇಳಿದರು.

EX MLC Ivan D souza
ಮಾಜಿ ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜಾ

By

Published : Jun 30, 2020, 5:10 PM IST

ಮಂಗಳೂರು: ಕೊರೊನಾ ಸೋಂಕಿತರನ್ನು ಸರ್ಕಾರಿ ಆಸ್ಪತ್ರೆಯಲ್ಲಿ ಬೆಡ್ ಇಲ್ಲವೆಂದು ಖಾಸಗಿ ಆಸ್ಪತ್ರೆಗಳಿಗೆ ಕಳುಹಿಸಲಾಗುತ್ತಿದೆ. ಆದರೆ ಅಲ್ಲಿ ತಗಲುವ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಬೇಕು ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಐವನ್ ಡಿಸೋಜ ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಖಾಸಗಿ ಆಸ್ಪತ್ರೆಯಲ್ಲಿ ದುಬಾರಿ ಬಿಲ್ ಮಾಡಿದರೆ ಜನಸಾಮಾನ್ಯರಿಗೆ ಅದನ್ನು ಕಟ್ಟಲು ಕಷ್ಟ. ಆರೋಗ್ಯ ಭಾಗ್ಯ ಯೋಜನೆಯಲ್ಲಿ ಚಿಕಿತ್ಸೆ ವೆಚ್ಚವನ್ನು ಪಡೆಯಲಿ ಅಥವಾ ಆ ಬಿಲ್ಲನ್ನು ಸರ್ಕಾರವೇ ಕಟ್ಟಲಿ ಎಂದರು.

ವಿಧಾನ ಪರಿಷತ್ ಮಾಜಿ ಸದಸ್ಯ ಐವನ್ ಡಿಸೋಜ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ದರ ನಿಗದಿಪಡಿಸಿಲ್ಲ. ಕೊರೊನಾ ಪ್ರಕರಣ ಹೆಚ್ಚಾಗುತ್ತಿದ್ದಂತೆ ಸರ್ಕಾರ ಜನರನ್ನು ಕೈಬಿಟ್ಟಂತೆ ಭಾಸವಾಗುತ್ತಿದೆ. ಸರ್ಕಾರಕ್ಕೆ ಜನರ ಆರೋಗ್ಯ ರಕ್ಷಣೆ ಮುಖ್ಯವೋ, ಸರ್ಕಾರದ ಆರ್ಥಿಕತೆ ಮುಖ್ಯವೋ ಎಂಬುದು ತಿಳಿಯುತ್ತಿಲ್ಲ ಎಂದು ಕಿಡಿಕಾರಿದರು.

ABOUT THE AUTHOR

...view details