ಮಂಗಳೂರು: ಚರ್ಚ್ಗಳಲ್ಲಿ ಕೋವಿಡ್ ಲಸಿಕೆ ಪಡೆಯಬೇಡಿ ಎಂದು ಪ್ರಚಾರ ಮಾಡಲಾಗುತ್ತಿದೆ ಎಂಬ ಆರೋಪ ಮಾಡಿದ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಎಐಸಿಸಿ ರಾಷ್ಟ್ರೀಯ ಕಾರ್ಯದರ್ಶಿ ಐವನ್ ಡಿಸೋಜ ಅವರು ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಕ್ರೈಸ್ತ ಸಮುದಾಯದಲ್ಲಿ ಕೋವಿಡ್ ಲಸಿಕೆ ಪಡೆಯದಂತೆ ಪ್ರಚಾರ ಮಾಡಲಾಗುತ್ತಿದೆ ಎಂದು ಯಾವುದೇ ಪುರಾವೆಗಳಿಲ್ಲದೆ ಸಂಸದೆ ಶೋಭಾ ಕರಂದ್ಲಾಜೆಯವರು ಸಮುದಾಯದ ಬಗ್ಗೆ ಸುಳ್ಳು ಹೇಳಿಕೆ ನೀಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.