ಮಂಗಳೂರು: ಅಡಿಕೆ ಕ್ಯಾನ್ಸರ್ ಕಾರಕ ಅಲ್ಲ ಎಂಬುದನ್ನು ಸ್ಪಷ್ಟಪಡಿಸಲು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿತ್ತು. ಆದರೆ, ಇಂದಿನವರೆಗೂ ಅಡಿಕೆ ಬೆಳೆಯ ಬಗ್ಗೆ ಕೇಂದ್ರ ಸರ್ಕಾರ ಸ್ಪಷ್ಟವಾದ ನಿಲುವನ್ನು ಪ್ರಕಟ ಮಾಡಿಲ್ಲ ಎಂದು ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ ಹೇಳಿದರು.
ಅಡಿಕೆ ಬೇಡಿಕೆ ಕುಸಿಯಲು ಕೇಂದ್ರ ಸರ್ಕಾರ ಕಾರಣ: ಐವನ್ ಡಿಸೋಜ
ಅಡಿಕೆ ಕ್ಯಾನ್ಸರ್ ಕಾರಕ ಅಲ್ಲ ಎಂಬುದನ್ನು ಸ್ಪಷ್ಟಪಡಿಸಲು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿತ್ತು. ಆದರೆ ಇಂದಿನವರೆಗೂ ಅಡಿಕೆ ಬೆಳೆಯ ಬಗ್ಗೆ ಕೇಂದ್ರ ಸರ್ಕಾರ ಸ್ಪಷ್ಟವಾದ ನೀತಿಯನ್ನು ಪ್ರಕಟ ಮಾಡಿಲ್ಲ ಎಂದು ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ ಹೇಳಿದರು.
ನಗರದ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ಭಾರತದಲ್ಲಿ ಬೇಕಾದಷ್ಟು ಅಡಿಕೆ ಉತ್ಪಾದನೆ ಮಾಡಿದರೂ, ಬೇಡಿಕೆ ಕುಸಿದಿದೆ. ಅಡಿಕೆ ಕ್ಯಾನ್ಸರ್ ಕಾರಕ ಎಂಬ ಭಯವೇ ಇದಕ್ಕೆ ಕಾರಣ ಎಂದರು.
ಅಡಿಕೆ ಬೆಳೆಗಾರರ ಪ್ರತ್ಯೇಕ ಮಂಡಳಿ ರಚನೆಯಾಗಬೇಕೆಂದು ರೈತರಿಂದ ಕೂಗು ಕೇಳಿ ಬರುತ್ತಿದೆ. ದೇಶದಲ್ಲಿ ಬೆಳೆಯುವ ಒಟ್ಟು ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕ ಒಂದರಲ್ಲಿಯೇ 51 ಶೇಕಡಾ ಬೆಳೆಯಲಾಗುತ್ತದೆ. ಅಲ್ಲದೆ ಪ್ರಪಂಚದ ಒಟ್ಟು ಅಡಿಕೆ ಉತ್ಪಾದನೆಯಲ್ಲಿ ಭಾರತವೊಂದೇ 49 ಶೇಕಡಾ ಉತ್ಪಾದಿಸುತ್ತದೆ. ಆದ್ದರಿಂದ ನಮ್ಮ ದೇಶದ ಅಡಿಕೆಗೆ ಉತ್ತಮ ಬೇಡಿಕೆ ಇದೆ ಎಂದು ಐವನ್ ಡಿಸೋಜ ತಿಳಿಸಿದರು.