ಮಂಗಳೂರು :ವಿಧಾನ ಪರಿಷತ್ ಮಾಜಿ ಮುಖ್ಯ ಸಚೇತಕ ಐವನ್ ಡಿಸೋಜ ಅವರಿಗೆ ಇಂದು ಕೊರೊನಾ ಸೋಂಕು ತಗುಲಿದೆ. ಈ ಕುರಿತಾಗಿ ಅವರು ಸಾಮಾಜಿಕ ಜಾಲತಾಣದಲ್ಲಿ ಖಚಿತ ಪಡಿಸಿದ್ದಾರೆ.
ಐವನ್ ಡಿಸೋಜ ಮತ್ತು ಅವರ ಪತ್ನಿಗೆ ಕೊರೊನಾ ದೃಢಪಟ್ಟಿದ್ದು, ಅವರಿಗೆ ಯಾವುದೇ ಕೊರೊನಾ ಲಕ್ಷಣಗಳಿರಲಿಲ್ಲ. ಕೊರೊನಾ ಪರೀಕ್ಷೆ ನಡೆಸಿದ ಸಂದರ್ಭದಲ್ಲಿ ಕೊರೊನಾ ತಗುಲಿರುವುದು ದೃಢಪಟ್ಟಿದೆ.
ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನಿನ್ನೆ ಮತ್ತು ಇಂದು ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸದಲ್ಲಿದ್ದ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಜೊತೆಗೆ ಐವನ್ ಡಿಸೋಜ ಓಡಾಡಿಕೊಂಡಿದ್ದು, ಡಿಕೆಶಿಗೆ ಕೊರೊನಾ ಭೀತಿ ಎದುರಾಗಿದೆ.
ಮಂಗಳೂರು ವಿಮಾನ ನಿಲ್ದಾಣದಿಂದಲೇ ನಿನ್ನೆ ಡಿ ಕೆ ಶಿವಕುಮಾರ್ ಜೊತೆಗಿದ್ದ ಐವನ್ ಡಿಸೋಜ, ಇಂದು ಕೂಡ ಅವರ ಜೊತೆಗೆ ಓಡಾಡಿಕೊಂಡಿದ್ದರು. ಇದರಿಂದ ಹಲವು ಕಾಂಗ್ರೆಸ್ ನಾಯಕರಿಗೆ, ಕಾರ್ಯಕರ್ತರಿಗೆ ಆತಂಕ ಎದುರಾಗಿದೆ.