ಕರ್ನಾಟಕ

karnataka

ETV Bharat / state

ನೆರೆ ಪರಿಹಾರ ಬಿಡುಗಡೆ ಆಗದಿದ್ರೆ ಅಧಿವೇಶನಕ್ಕೆ ಬಹಿಷ್ಕಾರ: ಐವನ್ ಡಿಸೋಜ ಎಚ್ಚರಿಕೆ

ನೆರೆ ಪರಿಹಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ರಾಜ್ಯವನ್ನು ನಿರ್ಲಕ್ಷಿಸಿರುವುದರಿಂದ ಅ.10 ರಿಂದ ನಡೆಯುವ ವಿಧಾನಸಭಾ ಅಧಿವೇಶನದಲ್ಲಿ ಕಾಂಗ್ರೆಸ್​ನಿಂದ ಪ್ರತಿಭಟನೆ ನಡೆಸಲಾಗುವುದು. ವಿಧಾನಸಭಾ ಅಧಿವೇಶನ ಬಹಿಷ್ಕಾರ ಆದರೆ ಅದಕ್ಕೆ ಬಿಜೆಪಿಯೇ ಕಾರಣವೆಂದು ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ ಹೇಳಿದ್ದಾರೆ.

ನೆರೆಪರಿಹಾರದಲ್ಲಿ ನಿರ್ಲಕ್ಷ್ಯ ಆರೋಪ: ವಿಧಾನಸಭಾ ಅಧಿವೇಶನ ಬಹಿಷ್ಕಾರದ ಎಚ್ಚರಿಕೆ ನೀಡಿದ ಐವನ್ ಡಿಸೋಜ

By

Published : Oct 2, 2019, 2:26 PM IST

ಮಂಗಳೂರು:ನೆರೆ ಪರಿಹಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ರಾಜ್ಯವನ್ನು ನಿರ್ಲಕ್ಷಿಸಿರುವುದರಿಂದ ಅ.10 ರಿಂದ ನಡೆಯುವ ವಿಧಾನಸಭಾ ಅಧಿವೇಶನದಲ್ಲಿ ಕಾಂಗ್ರೆಸ್​ನಿಂದ ಪ್ರತಿಭಟನೆ ನಡೆಸಲಾಗುವುದು. ನಾವು ಅಧಿವೇಶನ ಬಹಿಷ್ಕರಿಸಿದರೆ ಅದಕ್ಕೆ ಬಿಜೆಪಿ ಕಾರಣವೆಂದು ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ ಹೇಳಿದ್ದಾರೆ.

ನೆರೆಪರಿಹಾರದಲ್ಲಿ ನಿರ್ಲಕ್ಷ್ಯ ಆರೋಪ: ವಿಧಾನಸಭಾ ಅಧಿವೇಶನ ಬಹಿಷ್ಕಾರದ ಎಚ್ಚರಿಕೆ ನೀಡಿದ ಐವನ್ ಡಿಸೋಜ

ಮಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ನೆರೆ ಹಾನಿಯಿಂದ 35 ಸಾವಿರ ಕೋಟಿ ರೂಪಾಯಿ ನಷ್ಟವಾಗಿದೆ ಎಂದು ಸರ್ಕಾರವೇ ಹೇಳಿದೆ. ಆದರೆ ಕೇಂದ್ರ ಸರ್ಕಾರ ಈವರೆಗೂ ನೆರೆ ಪರಿಹಾರ ಬಿಡುಗಡೆ ಮಾಡಿಲ್ಲ. ಬಿಹಾರದಲ್ಲಿ ಪ್ರವಾಹವಾದಾಗ ಟ್ವೀಟ್ ಮೂಲಕ ನೆರವಿನ‌ ಭರವಸೆ ನೀಡಿದ್ದಾರೆ. ಆದರೆ ಕರ್ನಾಟಕದ ಬಗ್ಗೆ ನಿರ್ಲಕ್ಷ್ಯ ಧೋರಣೆ ತಾಳಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಈ ನಿರ್ಲಕ್ಷ್ಯಕ್ಕೆ ಕರ್ನಾಟಕದ ಮುಖ್ಯಮಂತ್ರಿ, ಸಂಸದರಿಗೆ ಪ್ರಧಾನಿ ಜೊತೆಗೆ ಮಾತನಾಡಲು ಧೈರ್ಯ ಇಲ್ಲದಿರುವುದೇ ಕಾರಣ. ರಾಜ್ಯದ ಬಗ್ಗೆ ನಿರ್ಲಕ್ಷ್ಯ ತೋರಿರುವುದು ಖಂಡನೀಯ ಎಂದರು.

ABOUT THE AUTHOR

...view details