ಕರ್ನಾಟಕ

karnataka

ETV Bharat / state

ಜೈನಮುನಿ ಹತ್ಯೆ ಪ್ರಕರಣ: ಮಂಗಳೂರಿನಲ್ಲಿ ಪ್ರತಿಭಟನಾ ಮೌನ ಮೆರವಣಿಗೆ, ಜಿಲ್ಲಾಧಿಕಾರಿಗೆ ಮನವಿ - ಮಂಗಳೂರಿನಲ್ಲಿ ಪ್ರತಿಭಟನಾ ಮೌನ ಮೆರವಣಿಗೆ

ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಪ್ರಕರಣವನ್ನು ಖಂಡಿಸಿ ಮೂಡುಬಿದಿರೆಯ ಶ್ರೀ ಚಾರುಕೀರ್ತಿ ಭಟ್ಟಾರಕರ ಉಪಸ್ಥಿತಿಯಲ್ಲಿ ಮಂಗಳೂರಿನಲ್ಲಿ ಮೌನ ಮೆರವಣಿಗೆ ನಡೆಸಲಾಯಿತು.

ಮಂಗಳೂರಿನಲ್ಲಿ ಪ್ರತಿಭಟನಾ ಮೌನ ಮೆರವಣಿಗೆ
ಮಂಗಳೂರಿನಲ್ಲಿ ಪ್ರತಿಭಟನಾ ಮೌನ ಮೆರವಣಿಗೆ

By

Published : Jul 10, 2023, 8:29 PM IST

ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ

ಮಂಗಳೂರು:ದಿಗಂಬರ ಜೈನ ಮುನಿ ಆಚಾರ್ಯ 108 ಶ್ರೀ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಖಂಡಿಸಿ ಮಂಗಳೂರಿನ ಕ್ಲಾಕ್ ಟವರ್​ನಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿವರೆಗೆ ಮೌನ ಮೆರವಣಿಗೆ ನಡೆಸಲಾಯಿತು. ಇದೇ ವೇಳೆ, ಸಮಗ್ರ ತನಿಖೆಗೆ ಆಗ್ರಹಿಸಿ ಜೈನ ಸಮಾಜದ ಉಳಿದ ಮುನಿಗಳಿಗೆ ಸೂಕ್ತ ರಕ್ಷಣೆ ನೀಡಬೇಕೆಂದು‌ ಆಗ್ರಹಿಸಲಾಯಿತು.

ಭಾರತೀಯ ಜೈನ್ ಮಿಲನ್ ಮಂಗಳೂರು ವಿಭಾಗ ಹಾಗೂ ಸಮಸ್ತ ಜೈನ ಸಮಾಜದ ಬಂಧುಗಳು ಮೂಡುಬಿದಿರೆಯ ಶ್ರೀ ಚಾರುಕೀರ್ತಿ ಭಟ್ಟಾರಕರವರ ಉಪಸ್ಥಿತಿಯಲ್ಲಿ ಈ ಮೌನ ಮೆರವಣಿಗೆ ನಡೆಸಿದರು. ಆ ಬಳಿಕ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸಿಎಂ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿರುವ ಮನವಿಯನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಲಾಯಿತು.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ಜೈನ ಮುನಿ ಆಚಾರ್ಯ ಶ್ರೀ ಕಾಮ ಕುಮಾರ ನಂದಿ ಮಹಾರಾಜರಿಗೆ ವಿದ್ಯುತ್‌ ಶಾಕ್ ನೀಡಿ ತುಂಡು ತುಂಡಾಗಿ ಕತ್ತರಿಸಿ ಕೊಳವೆ ಬಾವಿಯಲ್ಲಿ ಹಾಕಿರುವ ಘಟನೆ ಅಮಾನವೀಯ ಹೇಯ, ಕೃತ್ಯವಾಗಿದೆ. ಈ ಘಟನೆ ಇಡೀ ರಾಜ್ಯವನ್ನು ಆತಂಕಕ್ಕೀಡು ಮಾಡಿದೆ.

ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಪ್ರಾಥಮಿಕ ತನಿಖೆ ನಡೆಸಿ ಈಗಾಗಲೇ ಇಬ್ಬರು ಆರೋಪಿಗಳನ್ನು ಬಂಧಿಸಿರುತ್ತಾರೆ. ಆರೋಪಿತರು ಕಾನೂನಿನಡಿ ಯಾವುದೇ ರೀತಿಯಲ್ಲಿ ಆರೋಪದಿಂದ ನುಣುಚಿಕೊಳ್ಳಲು ಅವಕಾಶ ನೀಡದಂತೆ ಸೂಕ್ತ ತನಿಖಾಧಿಕಾರಿಯನ್ನು ನೇಮಿಸಿ ಎಲ್ಲಾ ಆಯಾಮಗಳಲ್ಲಿ ಸಮಗ್ರ ತನಿಖೆ ನಡೆಸಿ ಲೋಪ ದೋಷಗಳು ಉಳಿಯದಂತೆ ದೋಷಾರೋಪಣ ಪಟ್ಟಿ ಸಲ್ಲಿಸುವಂತೆ ತನಿಖಾಧಿಕಾರಿಗಳಿಗೆ ಆದೇಶಿಸುವಂತೆ ಮನವಿ ಮಾಡಲಾಯಿತು.

ಇದನ್ನೂ ಓದಿ:ಜೈನಮುನಿ ಹತ್ಯೆ ಖಂಡಿಸಿ ಸದನದಲ್ಲಿ ಹೋರಾಟ: ಬಸವರಾಜ ಬೊಮ್ಮಾಯಿ

ಈ ಸಂದರ್ಭದಲ್ಲಿ ಮಾತನಾಡಿದ ಮೂಡಬಿದಿರೆ ಮಠದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅವರು, ಮುನಿ ಆಚಾರ್ಯ ಶ್ರೀ ಕಾಮಕುಮಾರ ಒಳ್ಳೆಯ ಲೇಖಕರಾಗಿದ್ದು, ಧಾರ್ಮಿಕ‌ ಗ್ರಂಥವನ್ನು ಬರೆದಿದ್ದಾರೆ. ಅಮಾಯಕ ಮುನಿಗಳನ್ನು‌ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಅಪರಾಧಿಗಳು ಯಾವುದೇ ಕಾರಣಕ್ಕೂ ಹೊರಬಾರದಂತೆ ಅವರಿಗೆ ಕಠಿಣ ಶಿಕ್ಷೆಯನ್ನು ವಿಧಿಸಬೇಕು. ಇದೀಗ ಶಾಂತಿ ಪ್ರಿಯ ರಾಜ್ಯದಲ್ಲಿ ಅಸುರಕ್ಷತೆಯ ವಾತಾವರಣ ಇದೆ. ದೇಶದ ಅಲ್ಲಲ್ಲಿ ನಡೆಯುತ್ತಿರುವ ಘಟನೆಗಳಿಂದ ಸಂವಿಧಾನದ ಮೇಲೆ ನಂಬಿಕೆ ಕಡಿಮೆಯಾಗಿದೆ ಎಂಬ ಭಾವನೆ ಸೃಷ್ಟಿಸಿದೆ.

ಇದನ್ನೂ ಓದಿ:ಜೈನ ಮುನಿ ಹತ್ಯೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಸರ್ಕಾರ ಜೈನ ಮುನಿಗಳಿಗೆ ರಕ್ಷಣೆ ನೀಡುವಂತೆ ಒತ್ತಾಯ

ಶಿಕ್ಷೆಯ ಬಗ್ಗೆ ಭಯವಿಲ್ಲದಿದ್ದರೆ ಮುಂದೆ ಹಿಂಸೆಗೆ ಪ್ರಚೋದನೆ ಆಗಬಹುದು. ಆರೋಪಿಗಳಿಗೆ ಯಾವುದೇ ರಕ್ಷಣೆಯನ್ನು ಕೊಡದೆ ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು. ವಿಶೇಷ ಸಮಿತಿಯ ಮೂಲಕ ನ್ಯಾಯ ಒದಗಿಸುವ ಕೆಲಸ ಮಾಡಬೇಕು. ಜಗತ್ತಿನೆಲ್ಲೆಡೆಗೆ ಇದು ಕೆಟ್ಟ ಸುದ್ದಿಯಾಗಿ ಪರಿಣಮಿಸಿದೆ. ಸಾಮರಸ್ಯದ ಸಂದೇಶ ದೇಶಕ್ಕೆ ಬೇಕಾಗಿದೆ. ಶಾಂತಿ ಸೌಹಾರ್ದತೆಯಿಂದ ದೇಶ ಕಟ್ಟುವ ಕೆಲಸ ಆಗಬೇಕಾಗಿದೆ. ಎಲ್ಲ ಶ್ರದ್ಧಾಕೇಂದ್ರಗಳಲ್ಲಿ ಸಿಸಿಟಿವಿ ಅಳವಡಿಸಿ ಇಂತಹ ಘಟನೆಗಳನ್ನು ತಡೆಯಬಹುದಾಗಿದೆ ಎಂದು ಹೇಳಿದರು.

ಇದನ್ನೂ ಓದಿ:Jain monk murder: ಜೈನ ಮುನಿ ಹತ್ಯೆ ಪ್ರಕರಣದ ಹಿಂದೆ ಉಗ್ರಗಾಮಿಗಳ ಕೈವಾಡ ಇದೆ.. ಶಾಸಕ ಸಿದ್ದು ಸವದಿ

ABOUT THE AUTHOR

...view details