ಮಂಗಳೂರು:ರಾಷ್ಟ್ರೀಯ ಬಿಲ್ಲವ ಮಹಾಮಂಡಲದ ಸ್ಥಾಪಕಾಧ್ಯಕ್ಷ ಜಯ ಸಿ ಸುವರ್ಣ (82) ಇಂದು ಮುಂಜಾನೆ ಮುಂಬಯಿಯಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನ ಹೊಂದಿದ್ದಾರೆ.
ರಾಷ್ಟ್ರೀಯ ಬಿಲ್ಲವ ಮಹಾಮಂಡಲದ ಸ್ಥಾಪಕಾಧ್ಯಕ್ಷ ಜಯ ಸಿ ಸುವರ್ಣ ನಿಧನ - ನಳಿನ್ ಕುಮಾರ್ ಕಟೀಲ್ ಲೆಟೆಸ್ಟ್ ಟ್ವೀಟ್
ಅಪ್ರತಿಮ ಸಮಾಜ ಸೇವಕ, ಕೊಡುಗೈ ದಾನಿ, ಭಾರತ್ ಬ್ಯಾಂಕಿನ ಶಿಲ್ಪಿ, ರಾಷ್ಟ್ರೀಯ ಬಿಲ್ಲವ ಮಹಾಮಂಡಲದ ಸ್ಥಾಪಕಾಧ್ಯಕ್ಷ ಶ್ರೀ ಜಯ ಸಿ ಸುವರ್ಣ ಅವರ ದಿವ್ಯಾತ್ಮಕ್ಕೆ ಭಗವಂತನು ಸದ್ಗತಿಯನ್ನು ಕರುಣಿಸಲಿ ಹಾಗೂ ಕುಟುಂಬ ವರ್ಗ ಹಾಗೂ ಅಪಾರ ಅಭಿಮಾನಿ ವರ್ಗಕ್ಕೆ ದುಃಖವನ್ನು ಸಹಿಸುವ ಶಕ್ತಿಯನ್ನು ದೇವರು ಅನುಗ್ರಹಿಸಲಿ..
ಮಂಗಳೂರಿನ ಮುಲ್ಕಿ ಮೂಲದ ಜಯ ಸಿ ಸುವರ್ಣ ಮುಂಬಯಿಯಲ್ಲಿ ನೆಲೆಸಿದ್ದರು. ಮುಂಬಯಿನಲ್ಲಿ ಹೋಟೆಲ್ ಉದ್ಯಮಿಯಾಗಿರುವ ಇವರು ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದರು. ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಅವರ ನಿಕಟವರ್ತಿಯಾಗಿದ್ದ ಜಯ ಸಿ ಸುವರ್ಣ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಅಭಿ ಸಮಿತಿ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ. ಭಾರತ್ ಕೋ ಆಪರೇಟಿವ್ ಬ್ಯಾಂಕ್ನ ಮಾಜಿ ಅಧ್ಯಕ್ಷರಾಗಿರುವ ಇವರು ಮುಂಬಯಿ ಬಿಲ್ಲವ ಭವನ ಮತ್ತು ಮಹಾಮಂಡಲ ಭವನ ಮುಲ್ಕಿ ಇದರ ನಿರ್ಮಾತೃ ಆಗಿದ್ದು, ಸದ್ಯ ಪತ್ನಿ ಮತ್ತು ನಾಲ್ವರು ಪುತ್ರರನ್ನು ಅಗಲಿದ್ದಾರೆ.
ನಳಿನ್ ಕುಮಾರ್ ಕಟೀಲ್ ಸಂತಾಪ: ಜಯ ಸಿ ಸುವರ್ಣ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಂತಾಪ ವ್ಯಕ್ತಪಡಿಸಿದ್ದಾರೆ. ನಮ್ಮೆಲ್ಲರ ಆದರಣೀಯರಾಗಿದ್ದ ಅಪ್ರತಿಮ ಸಮಾಜ ಸೇವಕ, ಕೊಡುಗೈ ದಾನಿ, ಭಾರತ್ ಬ್ಯಾಂಕಿನ ಶಿಲ್ಪಿ, ರಾಷ್ಟ್ರೀಯ ಬಿಲ್ಲವ ಮಹಾಮಂಡಲದ ಸ್ಥಾಪಕಾಧ್ಯಕ್ಷ ಶ್ರೀ ಜಯ ಸಿ ಸುವರ್ಣ ಅವರ ದಿವ್ಯಾತ್ಮಕ್ಕೆ ಭಗವಂತನು ಸದ್ಗತಿಯನ್ನು ಕರುಣಿಸಲಿ ಹಾಗೂ ಕುಟುಂಬ ವರ್ಗ ಹಾಗೂ ಅಪಾರ ಅಭಿಮಾನಿ ವರ್ಗಕ್ಕೆ ದುಃಖವನ್ನು ಸಹಿಸುವ ಶಕ್ತಿಯನ್ನು ದೇವರು ಅನುಗ್ರಹಿಸಲಿ ಎಂದು ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ.