ಮಂಗಳೂರು: ಬಿಜೆಪಿ ಮುಖಂಡ ಜಗದೀಶ್ ಅಧಿಕಾರಿಯನ್ನು ಪಕ್ಷದಿಂದ ಉಚ್ಚಾಟಿಸಬೇಕೆಂದು ಪ್ರತಿಭಟನೆ ನಡೆಸಿದ ಜೆಡಿಎಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಇಂದು ನಡೆದಿದೆ.
ಜಗದೀಶ್ ಅಧಿಕಾರಿ ಉಚ್ಚಾಟಿಸುವಂತೆ ಪ್ರತಿಭಟನೆ: ಜೆಡಿಎಸ್ ಕಾರ್ಯಕರ್ತರ ಬಂಧನ - ಜಗದೀಶ್ ಅಧಿಕಾರಿ
ಬಿಜೆಪಿ ಮುಖಂಡ ಜಗದೀಶ್ ಅಧಿಕಾರಿಯನ್ನು ಪಕ್ಷದಿಂದ ಉಚ್ಚಾಟಿಸಬೇಕೆಂದು ಪ್ರತಿಭಟನೆ ನಡೆಸಿದ ಸುಮಾರು 25ಕ್ಕೂ ಹೆಚ್ಚು ಜೆಡಿಎಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
![ಜಗದೀಶ್ ಅಧಿಕಾರಿ ಉಚ್ಚಾಟಿಸುವಂತೆ ಪ್ರತಿಭಟನೆ: ಜೆಡಿಎಸ್ ಕಾರ್ಯಕರ್ತರ ಬಂಧನ protest](https://etvbharatimages.akamaized.net/etvbharat/prod-images/768-512-10599994-thumbnail-3x2-chaiii.jpg)
ಜಗದೀಶ್ ಅಧಿಕಾರಿಯವರು ಇತ್ತೀಚೆಗೆ ಬಿಲ್ಲವ ಸಮುದಾಯ, ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ ಹಾಗೂ ತುಳುನಾಡಿನ ಕ್ರಾಂತಿ ಪುರುಷರಾದ ಕೋಟಿ-ಚೆನ್ನಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಬಿಜೆಪಿ ಪಕ್ಷದಿಂದ ಅವರನ್ನು ಉಚ್ಚಾಟನೆ ಮಾಡಬೇಕೆಂದು ಜೆಡಿಎಸ್ ಇಂದು ನಗರದ ಕೊಡಿಯಾಲ್ ಬೈಲ್ ನಲ್ಲಿರುವ ಬಿಜೆಪಿ ಕಚೇರಿಯ ಮುಂಭಾಗ ಪ್ರತಿಭಟನೆ ನಡೆಸಲು ಆಯೋಜಿಸಿತ್ತು.
ಸುಮಾರು 25ಕ್ಕೂ ಹೆಚ್ಚು ಜೆಡಿಎಸ್ ಕಾರ್ಯಕರ್ತರು ಜಗದೀಶ್ ಅಧಿಕಾರಿ ವಿರುದ್ಧ ಧಿಕ್ಕಾರ ಕೂಗುತ್ತಾ ಕಲಾಕುಂಜ ರಸ್ತೆಯಿಂದ ಮೇಲೆ ಬಂದು ಓಶಿಯನ್ ಪರ್ಲ್ ತಲುಪುತ್ತಿದ್ದಂತೆ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದರು. ಬಿಜೆಪಿ ಕಚೇರಿ ಮುಂಭಾಗವೂ ಬ್ಯಾರಿಕೇಡ್ ಅಳವಡಿಸಿ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿತ್ತು.