ನವ ಮಂಗಳೂರು ಬಂದರು ಪ್ರಾಧಿಕಾರದಲ್ಲಿ (NMPT) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಪದವೀಧರ ಮತ್ತು ಡಿಪ್ಲೊಮಾ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಮೆಕಾನಿಕಲ್, ಸಿವಿಲ್, ಎಲೆಕ್ಟ್ರಿಕಲ್, ಕಂಪ್ಯೂಟರ್ ಸೈನ್ಸ್ ಮತ್ತು ವಾಣಿಜ್ಯ ಪದವವೀಧರ ಅಭ್ಯರ್ಥಿಗಳ ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ. ಅಪ್ರೆಂಟಿಸ್ ಅವಧಿಯಲ್ಲಿ ಅಭ್ಯರ್ಥಿಗಳಿಗೆ ಗೌರವಧನ ನೀಡಲಾಗುತ್ತದೆ.
ಹುದ್ದೆಗಳ ವಿವರ: ವಿವಿಧ ಇಂಜಿನಿಯರಿಂಗ್ ಪದವಿ ಮತ್ತು ವಾಣಿಜ್ಯ ಪದವೀಧರ ಅಪ್ರೆಂಟಿಸ್ ಹುದ್ದೆಗಳು ಸೇರಿದಂತೆ ಒಟ್ಟು 27 ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗಿದೆ. ಪದವೀಧರ ಅಪ್ರೆಂಟಿಸ್ ಹುದ್ದೆಗಳು 16 ಇದ್ದು, ಡಿಪ್ಲೊಮಾ ಅಪ್ರೆಂಟಿಸ್ ಟ್ರೈನಿ ಹುದ್ದೆಗಳು 11 ಇವೆ.
ವಿದ್ಯಾರ್ಹತೆ: ಪದವೀಧರ ಅಪ್ರೆಂಟಿಸ್ ಟ್ರೈನಿ ಹುದ್ದೆಗೆ ಅಭ್ಯರ್ಥಿಗಳು ಸಂಬಂಧಿಸಿದ ವಿಭಾಗದಲ್ಲಿ ಬಿಇ ಪದವಿ ಪೂರ್ಣಗೊಳಿಸಿರಬೇಕು. ಡಿಪ್ಲೊಮಾ ಅಪ್ರೆಂಟಿಸ್ ಹುದ್ದೆಗೆ ಅಭ್ಯರ್ಥಿಗಳು ಡಿಪ್ಲೊಮಾ ಪದವಿ ಹೊಂದಿರಬೇಕು.
2021, 2022 ಮತ್ತು 2023ರಲ್ಲಿ ತೇರ್ಗಡೆ ಹೊಂದಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರು. ಅಂತಿಮ ಹಂತದ ಪದವಿ ವಿದ್ಯಾರ್ಥಿಗಳು, ಪರೀಕ್ಷೆ ಎದುರಿಸುತ್ತಿರುವವರು, ಫಲಿತಾಂಶಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಲ್ಲ.
ವೇತನ: ಪದವೀಧರ ಅಪ್ರೆಂಟಿಸ್ ಟ್ರೈನಿ ಹುದ್ದೆಗೆ ಮಾಸಿಕ 9,000 ರೂಪಾಯಿ, ಡಿಪ್ಲೊಮಾ ಅಪ್ರೆಂಟಿಸ್ ಹುದ್ದೆಗೆ ಮಾಸಿಕ 8,000 ರೂ ಸ್ಟೈಫಂಡ್ ನೀಡಲಾಗುತ್ತದೆ.