ಕರ್ನಾಟಕ

karnataka

ETV Bharat / state

ಪ್ರತಿ ಗ್ರಾಮ ಅಭಿವೃದ್ಧಿಯಾದರೆ ದೇಶ ಅಭಿವೃದ್ಧಿ: ಜಿಲ್ಲಾಧಿಕಾರಿ - ಪತ್ರಕರ್ತರ ಗ್ರಾಮ ವಾಸ್ತವ್ಯ ಕಾರ್ಯಕ್ರಮ

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ನಡೆಯುತ್ತಿರುವ ಪತ್ರಕರ್ತರ ಗ್ರಾಮ ವಾಸ್ತವ್ಯ ಕಾರ್ಯಕ್ರಮದ ಉದ್ಘಾಟನೆ ನೆರವೇರಿತು.

ಪತ್ರಕರ್ತರ ಗ್ರಾಮ ವಾಸ್ತವ್ಯ ಕಾರ್ಯಕ್ರಮ, Journalists village stay program in sullia
ಪತ್ರಕರ್ತರ ಗ್ರಾಮ ವಾಸ್ತವ್ಯ ಕಾರ್ಯಕ್ರಮ

By

Published : Jan 5, 2020, 11:54 PM IST

ಸುಳ್ಯ:ಗ್ರಾಮಗಳ ಅಭಿವೃದ್ಧಿಯಾದರೆ ದೇಶದ ಅಭಿವೃದ್ಧಿ ಸಾಧ್ಯ. ಬದಲಾವಣೆಗಳು ಕೆಳ ಹಂತದಿಂದಲೇ ಆರಂಭವಾಗಬೇಕು ಎಂದು ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಹೇಳಿದರು.

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ನಡೆಯುತ್ತಿರುವ ಪತ್ರಕರ್ತರ ಗ್ರಾಮ ವಾಸ್ತವ್ಯ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು. ಜನಸಾಮಾನ್ಯರು ಪತ್ರಕರ್ತರೆದುರು ಸಮಸ್ಯೆಗಳನ್ನು ಹೇಳಿಕೊಳ್ಳುತ್ತಾರೆ. ಹೀಗಾಗಿ ಅವರ ಮೂಲಕ ಇಂತಹ ಸಮಾಜಮುಖಿ ಕಾರ್ಯಕ್ರಮಗಳು ನಡೆಯುತ್ತಿರುವುದು ಉತ್ತಮ ಬೆಳವಣಿಗೆ ಎಂದರು.

ಪತ್ರಕರ್ತರ ಗ್ರಾಮ ವಾಸ್ತವ್ಯ ಕಾರ್ಯಕ್ರಮ

ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಮಾತನಾಡಿ, ಗ್ರಾಮ ವಾಸ್ತವ್ಯದಲ್ಲಿ ಬಂದ ಮನವಿಗಳನ್ನು ವಿಶೇಷ ಪ್ರಕರಣಗಳು ಎಂದು ಭಾವಿಸಿ ನಿಗದಿತ ಕಾಲಮಿತಿಯಲ್ಲಿ ಪೂರ್ಣಗೊಳಿಸಲು ಅಧಿಕಾರಿಗಳು ಮುತುವರ್ಜಿ ವಹಿಸಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ನಡೆದ ರಕ್ತದಾನ ಶಿಬಿರವನ್ನು ಸುಳ್ಯ ಶಾಸಕ ಎಸ್.ಅಂಗಾರ ಉದ್ಘಾಟಿಸಿದರು. ಸಮಾರೋಪ ಸಮಾರಂಭದಲ್ಲಿ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಮಾಜಿ ಸಚಿವ ಯು.ಟಿ. ಖಾದರ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ABOUT THE AUTHOR

...view details