ಕಡಬ: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮಂಗಳೂರು, ಕಡಬ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಜ.31 ರಂದು ಕಡಬದ ಕೊಂಬಾರು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿರುವ ಪತ್ರಕರ್ತರ ಗ್ರಾಮ ವಾಸ್ತವ್ಯ ಮತ್ತು ಜಾಗೃತಿ ಶಿಬಿರದ ಆಮಂತ್ರಣ ಪತ್ರಿಕೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಜ.23 ರಂದು ಬಿಡುಗಡೆಗೊಳಿಸಿದರು.
ಪತ್ರಕರ್ತರ ಗ್ರಾಮವಾಸ್ತವ್ಯ ಕಾರ್ಯಕ್ರಮ: ಡಾ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರ ಬಿಡುಗಡೆ - journalists village stay in kadaba konbaru school
ಜ.31 ರಂದು ಕಡಬದ ಕೊಂಬಾರು ಹಿ.ಪ್ರಾ. ಶಾಲೆಯಲ್ಲಿ ನಡೆಯಲಿರುವ ಪತ್ರಕರ್ತರ ಗ್ರಾಮವಾಸ್ತವ್ಯ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪತ್ರಕರ್ತರ ಗ್ರಾಮವಾಸ್ತವ್ಯ ಕಾರ್ಯಕ್ರಮವು ಗ್ರಾಮದ ಜನತೆಯ ಜೀವನ ಶೈಲಿಯನ್ನು, ಸಮಸ್ಯೆಗಳನ್ನು ಸುಧಾರಿಸುವ ನಿಟ್ಟಿನಲ್ಲಿ ಕೈಗೊಂಡಿರುವ ಕ್ರಮ ಅಭಿನಂದನಾರ್ಹ. ಮೂಕವೇದನೆ ಅನುಭವಿಸುವ ಹಲವಾರು ಗ್ರಾಮಸ್ಥರ ಪಾಲಿಗೆ ಈ ಕಾರ್ಯಕ್ರಮ ಪರಿಣಾಮಕಾರಿಯಾಗಲಿ ಎಂದು ಶುಭ ಹಾರೈಸಿದರು.
ಈ ವೇಳೆ ದ.ಕ. ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ, ಕೋಶಾಧಿಕಾರಿ ಪುಷ್ಪರಾಜ ಬಿ.ಎನ್, ಸದಸ್ಯರಾದ ಭಾಸ್ಕರ ರೈ ಕಟ್ಟ, ಅತಿಥೇಯ ಕಡಬದ ಅಧ್ಯಕ್ಷ ನಾಗರಾಜ ಎನ್.ಕೆ, ಸ್ಥಾಪಕಾಧ್ಯಕ್ಷ ಬಾಲಕೃಷ್ಣ ಕೊಯಿಲ, ಕಾರ್ಯದರ್ಶಿ ವಿಜಯ ಕುಮಾರ್ ಪೆರ್ಲ ಸೇರಿದಂತೆ ಸಂಘದ ಸದಸ್ಯರು ಉಪಸ್ಥಿತರಿದ್ದರು.
ಇದನ್ನೂ ಓದಿ:ಒಂದೇ ತಿಂಗಳಲ್ಲಿ 30ಕ್ಕೂ ಹೆಚ್ಚು ಕಡೆ ಕಳ್ಳತನ: ರಬಕವಿ-ಬನಹಟ್ಟಿ ಜನರ ನಿದ್ದೆಗೆಡಿಸಿದ ಖದೀಮರು