ಮಂಗಳೂರು: ಮಂಗಳೂರಿನಲ್ಲಿ ಕಾನೂನಿಗೆ ವಿರುದ್ಧವಾಗಿ ಪೊಲೀಸರು ಗೋಲಿಬಾರ್ ನಡೆಸಿದ್ದಾರೆ. ಹಾಗಾಗಿ ಘಟನೆ ಬಗ್ಗೆ ನ್ಯಾಯಾಂಗ ತನಿಖೆಯಾಗಬೇಕು ಎಂದು ಮಾಜಿ ಪೊಲೀಸ್ ಅಧಿಕಾರಿ ಹಾಗೂ ಕೆಪಿಸಿಸಿ ಕಾರ್ಯದರ್ಶಿ ಜಿ.ಎ.ಬಾವ ಆಗ್ರಹಿಸಿದ್ರು.
ಮಂಗಳೂರು ಗೋಲಿಬಾರ್ ಬಗ್ಗೆ ನ್ಯಾಯಾಂಗ ತನಿಖೆಯಾಗಬೇಕು: ಜಿ.ಎ.ಬಾವ ಆಗ್ರಹ - ಮಂಗಳೂರು ಗೋಲಿಬಾರ್ ಪ್ರಕರಣ
ಮಂಗಳೂರಿನಲ್ಲಿ ಕಾನೂನಿಗೆ ವಿರುದ್ಧವಾಗಿ ಪೊಲೀಸರು ಗೋಲಿಬಾರ್ ನಡೆಸಿದ್ದು, ಈ ಬಗ್ಗೆ ನ್ಯಾಯಾಂಗ ತನಿಖೆಯಾಗಬೇಕು ಎಂದು ಮಾಜಿ ಪೊಲೀಸ್ ಅಧಿಕಾರಿ ಜಿ.ಎ.ಬಾವ ಒತ್ತಾಯಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪೊಲೀಸರು ಮಾಡಿದ ಫೈರಿಂಗ್ ಕಾನೂನು ವಿರೋಧಿಯಾಗಿದೆ. ಕಳೆದ ಕೆಲವು ದಿನಗಳಿಂದ ಎನ್ಆರ್ಸಿ ಬಗ್ಗೆ ಪ್ರತಿಭಟನೆ ನಡೆಯುತ್ತಿದ್ದರೂ ಠಾಣಾ ವ್ಯಾಪ್ತಿಯಲ್ಲಿ ಯಾವುದೇ ಸಭೆ ನಡೆಸಿಲ್ಲ. ಫೈರಿಂಗ್ ಮಾಡುವ ಬಗ್ಗೆ ಸುಪ್ರೀಂಕೋರ್ಟ್ ನಿಯಮಾವಳಿಗಳಿದ್ದು, ಮೊದಲು ಮೈಕ್ ಮೂಲಕ ಎಚ್ಚರಿಕೆ ನೀಡಬೇಕು. ಎರಡು ಬಾರಿಯ ಫೈರಿಂಗ್ ನಡುವೆ ಸಮಯಾವಕಾಶ ಇರಬೇಕು. ಆದರೆ ಇದೆಲ್ಲವನ್ನೂ ಇಲ್ಲಿ ಪೊಲೀಸರು ಪಾಲಿಸಿಲ್ಲ ಎಂದರು.
ಎರಡು ಗುಂಡು ಹಾರಾಟ ನಡೆದ ಸ್ಥಳವನ್ನು ಪರಿಶೀಲಿಸಿದ್ದೇನೆ. ಒಂದು ಬಂದರು ಠಾಣೆಯಿಂದ ಸುಮಾರು 700 ಮೀಟರ್ ದೂರವಿದೆ. ಮತ್ತೊಂದು ಬಂದರು ಠಾಣೆಯಿಂದ 200 ಮೀಟರ್ ದೂರದಲ್ಲಿದೆ. ಫೈರಿಂಗ್ ಬಗ್ಗೆ ಕೂಲಂಕಷವಾಗಿ ತನಿಖೆಯಾಗಿ ಸತ್ಯಸಂಗತಿ ಹೊರಬರಬೇಕಾಗಿದೆ. ಪೊಲೀಸರು ಯಾರಿಗೋ ಸಂತೋಷಪಡಿಸುವ ಸಲುವಾಗಿ ಇಬ್ಬರನ್ನು ಗುಂಡಿಟ್ಟು ಸಾಯಿಸಿದ್ದಾರೆ ಎಂದು ಘಟನೆಗೆ ಆಕ್ಷೇಪ ವ್ಯಕ್ತಪಡಿಸಿದ್ರು.