ಕರ್ನಾಟಕ

karnataka

ETV Bharat / state

ಕಿಯೋನಿಕ್ಸ್ ಅಧ್ಯಕ್ಷರಾಗಿ ಕೆ.ಹರಿಕೃಷ್ಣ ಬಂಟ್ವಾಳ ನೇಮಕ - ಬಿಜೆಪಿ ನಾಯಕ ಕೆ. ಹರಿಕೃಷ್ಣ ಬಂಟ್ವಾಳ

ಬಿಜೆಪಿ ನಾಯಕ, ಬಿಲ್ಲವ ಸಮಾಜದ ಮುಖಂಡ ಕೆ.ಹರಿಕೃಷ್ಣ ಬಂಟ್ವಾಳ ಕಿಯೋನಿಕ್ಸ್ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.

Harikrishna
Harikrishna

By

Published : Jun 13, 2020, 4:03 PM IST

ಬಂಟ್ವಾಳ: ಬಿಜೆಪಿ ನಾಯಕ ಕೆ.ಹರಿಕೃಷ್ಣ ಬಂಟ್ವಾಳ ಅವರನ್ನು ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ (ಕಿಯೋನಿಕ್ಸ್) ಅಧ್ಯಕ್ಷರ ಹುದ್ದೆಗೆ ನೇಮಿಸಲಾಗಿದೆ.

ವಿದ್ಯುನ್ಮಾನ ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಧೀನ ಕಾರ್ಯದರ್ಶಿ ಸಿದ್ರಾಮಪ್ಪ ತಳವಾರ ಸರ್ಕಾರದ ಪರವಾಗಿ ಅಧಿಸೂಚನೆ ಹೊರಡಿಸಿದ್ದು, ಜೂನ್ 12ರಿಂದ ಮುಂದಿನ ಆದೇಶದವರೆಗೆ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

ಸುದೀರ್ಘವಾಗಿ ರಾಜಕೀಯದಲ್ಲಿ ಪಯಣ ನಡೆಸಿರುವ ಕೆ.ಹರಿಕೃಷ್ಣ ಬಂಟ್ವಾಳ ಕಳೆದ ಚುನಾವಣೆ ವೇಳೆ ರಾಜೇಶ್ ನಾಯ್ಕ್ ಉಳಿಪ್ಪಾಡಿ ಬಂಟ್ವಾಳ ಕ್ಷೇತ್ರದಲ್ಲಿ ಜಯ ಗಳಿಸುವಲ್ಲಿ ಮಹತ್ತರ ಪಾತ್ರ ವಹಿಸಿದ್ದರು. ಬಳಿಕ ಬಿಜೆಪಿಯಲ್ಲಿ ಜಿಲ್ಲಾ ಮಟ್ಟದ ಹುದ್ದೆಗಳನ್ನು ಅಲಂಕರಿಸಿದ ಹರಿಕೃಷ್ಣ, ಭಾಷಣಗಳಿಗೆ ಹೆಸರುವಾಸಿಯಾಗಿದ್ದಾರೆ. ಬಿಲ್ಲವ ಸಮಾಜ ಸಂಘಟನೆಯಲ್ಲಿ ಮುಂಚೂಣಿಯಲ್ಲಿ ದುಡಿದಿರುವ ಅವರಿಗೆ ಈ ಹುದ್ದೆ ದೊರಕಿದೆ.

ABOUT THE AUTHOR

...view details