ಬಂಟ್ವಾಳ (ದ.ಕ): ಕೆಲ ವರ್ಷಗಳ ಹಿಂದೆ ಎಸ್ಡಿಪಿಐ ಕಾರ್ಯಕರ್ತರು ಮಾಜಿ ಸಚಿವ ಬಿ.ರಮಾನಾಥ ರೈ ಅವರಿಗೆ ಬೆನ್ನು ತೋರಿಸಿ ಪ್ರತಿಭಟಿಸಿದವರು. ರಮಾನಾಥ ರೈ ಅವರೇ, ನೀವು ಎಸ್ಡಿಪಿಐ ಜೊತೆ ಹೊಂದಾಣಿಕೆ ಮಾಡಿಲ್ಲ ಎನ್ನುತ್ತೀರಿ. ಹಾಗಾದರೆ ಬಂಟ್ವಾಳ ಪುರಸಭಾಧ್ಯಕ್ಷ ಚುನಾವಣೆಯಲ್ಲಿ ಎಸ್ಡಿಪಿಐ ಕಾಂಗ್ರೆಸ್ ಪರವಾಗಿ ಕೈ ಎತ್ತಿ ಬೆಂಬಲಿಸಲು ಯಾವ ಶಕ್ತಿ ಕೆಲಸ ಮಾಡಿದೆ ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಕೆ.ಹರಿಕೃಷ್ಣ ಬಂಟ್ವಾಳ್ ಪ್ರಶ್ನಿಸಿದ್ದಾರೆ.
ಬಂಟ್ವಾಳ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಮಾಜಿ ಸಚಿವ ರಮಾನಾಥ ರೈ ವಿರುದ್ಧ ಕಟು ಟೀಕಾಪ್ರಹಾರ ನಡೆಸಿ, ಎಸ್ಡಿಪಿಐ ಅವರನ್ನು ಗಲಭೆಯ ಸಮಯ ಶಾಂತಿಗಾಗಿ ಪಾದಯಾತ್ರೆ ಸಂದರ್ಭ ಜೊತೆಗೆ ಸೇರಿಸಿಕೊಳ್ಳಲಿಲ್ಲ, ಈಗ ಬೆಂಬಲ ಹೇಗೆ ಸ್ವೀಕರಿಸಿದಿರಿ ಎಂದು ಪ್ರಶ್ನಿಸಿದರು.