ಕರ್ನಾಟಕ

karnataka

ETV Bharat / state

ದಕ್ಷಿಣ ಕನ್ನಡ ನೂತನ ಜಿಲ್ಲಾಧಿಕಾರಿಯಾಗಿ ಕೆ.ವಿ.ರಾಜೇಂದ್ರ ಅಧಿಕಾರ ಸ್ವೀಕಾರ - ಜಿಲ್ಲಾಧಿಕಾರಿ ಸಿಂಧೂ ರೂಪೇ

ದಕ್ಷಿಣ ಕನ್ನಡ ಜಿಲ್ಲೆಯ 130ನೇ ಜಿಲ್ಲಾಧಿಕಾರಿಯಾಗಿ ಡಾ. ಕೆ.ವಿ.ರಾಜೇಂದ್ರ ಇಂದು ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಅಧಿಕಾರ ಹಸ್ತಾಂತರಿಸಿದರು.

K. V Rajendra
ಡಾ. ಕೆ. ವಿ ರಾಜೇಂದ್ರ

By

Published : Jul 30, 2020, 3:48 PM IST

ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ ಇಂದು ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಅಧಿಕಾರ ಹಸ್ತಾಂತರಿಸಿದರು.

ಡಾ. ಕೆ.ವಿ.ರಾಜೇಂದ್ರ ದಕ್ಷಿಣ ಕನ್ನಡ ಜಿಲ್ಲೆಯ 130ನೇ ಜಿಲ್ಲಾಧಿಕಾರಿಯಾಗಿದ್ದಾರೆ.

ಡಾ. ಕೆ.ವಿ.ರಾಜೇಂದ್ರ

ಈ ಸಂದರ್ಭದಲ್ಲಿ ಮಾತನಾಡಿದ ಅವರು, ತಾವು ಈ ಹಿಂದೆ ಕರ್ತವ್ಯ ನಿರ್ವಹಿಸಿದ ಬೆಳಗಾವಿ ಜಿಲ್ಲೆ ಮತ್ತು ಇದೀಗ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ದಕ್ಷಿಣ ಕನ್ನಡ ಗಡಿ ಜಿಲ್ಲೆಗಳಾಗಿವೆ.‌ ಎರಡೂ ಕಡೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಿದ್ದು, ಇದೊಂದು ಸವಾಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾಡಳಿತ ಈ ಹಿಂದೆ ಮಾಡಿದ ಉತ್ತಮ ಅಭಿವೃದ್ಧಿ ಕಾರ್ಯವನ್ನು ಮುಂದುವರೆಸಲಾಗುವುದು. ಸುಧಾರಿಸಬೇಕಾದ ಕಾರ್ಯಕ್ಕೆ ವೇಗ ನೀಡಲಾಗುವುದು ಎಂದರು.

ನೂತನ ಜಿಲ್ಲಾಧಿಕಾರಿಯಾಗಿ ಡಾ. ಕೆ.ವಿ.ರಾಜೇಂದ್ರ ಅಧಿಕಾರ ಸ್ವೀಕಾರ

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಎಂ.ಜೆ.ರೂಪ, ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ABOUT THE AUTHOR

...view details